ಬೆಂಗಳೂರು: ಕುಮಾರಸ್ವಾಮಿ ಅವರು ಹಿಟ್ ಅಂಡ್ ರನ್ ಗಿರಾಕಿ ಅನ್ನೋದು ರಾಜ್ಯದ ಜನತೆಗೆ ಚೆನ್ನಾಗಿ ಗೊತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಮತ್ತು ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ನಿನ್ನೆ ಸುದ್ದಿಗೋಷ್ಠಿ ನಡೆಸಿ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಡಿ.ಕೆ.ಶಿವಕುಮಾರ್, ಎಚ್.ಡಿ.ಕುಮಾರಸ್ವಾಮಿ ಅವರು ಈ ಹಿಂದಿನಿಂದಲೂ ಮಾಡಿದ ಆರೋಪಗಳು ಯಾವುದೂ ಸಾಬೀತಾಗಿಲ್ಲ, ಪ್ರಜ್ವಲ್ ರೇವಣ್ಣ ಸೆಕ್ಸ್ ಗೇಟ್ ಪ್ರಕರಣದಲ್ಲಿ ನನ್ನ ಹೆಸರು ಮುನ್ನಲೆಗೆ ತಂದರೆ ಇಡೀ ರಾಜ್ಯದ ಗಮನ ಸೆಳೆಯಬಹುದು ಎನ್ನುವ ಕಾರಣಕ್ಕೆ ಅವರು ಪದೇ ಪದೇ ನನ್ನ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದಿದ್ದಾರೆ.
ಈ ಕೇಸಿನ ಹಿಂದೆ ಇರುವುದು ಬ್ಲಾಕ್ ಮೇಲ್ ಕಿಂಗ್ ಕುಮಾರಸ್ವಾಮಿ. ರಾಜಕಾರಣಿಗಳು, ಅಧಿಕಾರಿಗಳನ್ನು ಬ್ಲಾಕ್ ಮೇಲ್ ಮಾಡುವುದೇ ಅವರ ಕೆಲಸ. ಅವರಿಗೆ ದಿನಕ್ಕೊಮ್ಮೆ ನನ್ನ ಹೆಸರು ಎತ್ತದಿದ್ದರೆ ನಿದ್ದೆ ಬರಲ್ಲ. ಈಗಲೂ ನಾನು ಹೇಳುತ್ತಿದ್ದೇನೆ ಈ ಪ್ರಕರಣದ ಕಥಾನಾಯಕ, ಡೈರೆಕ್ಟರ್, ಪ್ರೋಡ್ಯೂಸರ್ ಎಲ್ಲಾ ಕುಮಾರಸ್ವಾಮಿ ಅವರೇ ಎಂದಿದ್ದಾರೆ.
ನಮ್ಮದು ರೇವಣ್ಣ ಅವರದು ಬೇರೆ ಕುಟುಂಬ ಅಂತ ಹಿಂದೆ ಅವರೇ ಹೇಳಿದ್ದರು. ಉಪ್ಪು ತಿಂದವನು ನೀರು ಕುಡಿಯಬೇಕು ಅಂತ ಕೂಡ ಹೇಳಿದ್ರು, ಈಗ ಯಾಕೆ ಮತ್ತೆ ಹಿಟ್ ಅಂಡ್ ರನ್ ಮಾಡ್ತಿದ್ದಾರೆ? ಪ್ರಕರಣ ಇನ್ನೂ ತನಿಖೆ ಹಂತದಲ್ಲಿದೆ, ಈಗಲೇ ತೀರ್ಪು ಕೊಡೋಕೆ ಕುಮಾರಸ್ವಾಮಿ ಅವರೇನು ಲಾಯರೋ? ಜಡ್ಜೋ? ಚರ್ಚೆ ಮಾಡಲು ಇನ್ನೂ ಟೈಮ್ ಇದೆ, ವಿಧಾನಸಭೆ ಅಧಿವೇಶನ ಇದೆ, ಎಲ್ಲಾ ತೆಗೆದುಕೊಂಡು ಬರಲಿ ಚರ್ಚೆ ಮಾಡೋಣ ಎಂದಿದ್ದಾರೆ.



