ಬೆಂಗಳೂರು: ಕಾಳಿ ನದಿಗೆ ನಿರ್ಮಿಸಿರುವ ಸೂಪಾ ಜಲಾಶಯ ಗರಿಷ್ಠ ಮಟ್ಟ ತಲುಪುತ್ತಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಹೆಚ್ಚುವರಿ ನೀರು ಹೊರಬಿಡುವ ಸಾಧ್ಯತೆ ಇದ್ದು, ಸುರಕ್ಷಿತ ಸ್ಥಳಕ್ಕೆ ಹೋಗುವಂತೆ ಅಣೆಕಟ್ಟೆಯ ಕೆಳದಂಡೆಯಲ್ಲಿರುವ ಜನರಿಗೆ ಕೆಪಿಸಿಎಲ್ ಮನವಿ ಮಾಡಿದೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸೂಪಾ ಜಲಾಶಯದ ಜಲಾನಯನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ನೀರಿನ ಒಳಹರಿವು ಹೆಚ್ಚಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಸತತವಾಗಿ ಏರಿಕೆಯಾಗುತ್ತಿದೆ. ಹೀಗಾಗಿ ಯಾವುದೇ ಸಮಯದಲ್ಲಿ ಜಲಾಶಯ ಗರಿಷ್ಠ ಮಟ್ಟ ತಲುಪುವ ನಿರೀಕ್ಷೆಯಿದೆ.
ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವುದೇ ಸಮಯದಲ್ಲಿ ಜಲಾಶಯದಿಂದ ಹೊರಬಿಡಬೇಕಾಗುತ್ತದೆ. ಆದ್ದರಿಂದ ಅಣೆಕಟ್ಟೆಯ ದಂಡೆಯಲ್ಲಿರುವ ಮತ್ತು ನದಿ ಪಾತ್ರದುದ್ದಕ್ಕೂ ಇರುವ ಸಾರ್ವಜನಿಕರು ತಮ್ಮ ಜನ, ದನಕರುಗಳು ಇತ್ಯಾದಿಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳಬೇಕು ಎಂದು ಕೆಪಿಸಿಎಲ್ ಮನವಿ ಮಾಡಿದೆ.
ಜೊತೆಗೆ, ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ, ಜಲ ಸಾಹಸ ಕ್ರೀಡೆಗಳು ಸೇರಿದಂತೆ ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸಬಾರದು ಎಂದು ಕೋರಿದೆ.
ಜಲಾಶಯದ ಗರಿಷ್ಠ ಮಟ್ಟ 564 ಮೀಟರ್ ಆಗಿದ್ದು, ನೀರಿನ ಸಂಗ್ರಹಣಾ ಸಾಮರ್ಥ್ಯ 147.55 ಟಿಎಂಸಿ ಆಗಿದೆ. ಪ್ರಸ್ತುತ (ಆ. 25ರಂದು) 558.95 ಅಡಿಗೂ ಹೆಚ್ಚು ನೀರು ನಿಂತಿದ್ದು, 126.662 ಟಿಎಂಸಿ ನೀರು ಸಂಗ್ರಹವಾಗಿದೆ. ಅಲ್ಲದೆ, ಜಲಾಶಯದ ಒಳಹರಿವು 25,954 ಕ್ಯುಸೆಕ್ ಇದೆ.




