ಕಲಬುರ್ಗಿ: ಜನರಿಗೆ ಖಾದಿಗಿಂತಲೂ ಖಾಕಿಯ ಮೇಲೆ ಹೆಚ್ಚಿನ ನಂಬಿಕೆ ಇದೆ. ಏಕೆಂದರೆ ಯಾವುದೇ ಸಮಸ್ಯೆ ಬಂದಾಗ ಸಾರ್ವಜನಿಕರು ಪೊಲೀಸರ ಬಳಿಗೆ ಸಹಾಯಕ್ಕಾಗಿ ಧಾವಿಸುತ್ತಾರೆ. ಕಾರಣ ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸವಿದೆ. ಇಂದು ಸಮಾಜ ನಿರ್ಭಯವಾಗಿ ಜೀವಿಸುತ್ತಿರುವುದಕ್ಕೆ ಗೃಹ ಇಲಾಖೆಯೇ ಕಾರಣವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಕಲಬುರಗಿ ನಗರದ ಡಿಎಆರ್ ಮೈದಾನದಲ್ಲಿ ನಡೆದ ಪೊಲೀಸ್ ವಾರ್ಷಿಕ ಕ್ರೀಡಾಕೂಟ 2024 ರ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸರ್ಕಾರದ ಕಾರ್ಯಕ್ರಮಗಳು ಹಾಗೂ ಯೋಜನೆಗಳು ಕಟ್ಟುನಿಟ್ಟಾಗಿ ಜನರಿಗೆ ತಲುಪುಬೇಕಾದರೆ ಗೃಹ ಇಲಾಖೆಯ ಪಾತ್ರ ಮಹತ್ವದ್ದಾಗಿದೆ. ಕಾನೂನಿನ ಸಂರಕ್ಷಣೆಯೇ ಮೂಲಮಂತ್ರವಾಗಿಸಿಕೊಂಡಿರುವ ಪೊಲೀಸರ ಬಳಿಗೆ ಸಾರ್ವಜನಿಕರು ಬರುವುದಕ್ಕೆ ಇದು ಕಾರಣವಾಗಿದೆ ಎಂದರು.
ಸರ್ಕಾರ ಹಾಗೂ ತಾವು ಪೊಲೀಸ್ ಇಲಾಖೆಯ ಹಿತರಕ್ಷಣೆಗೆ ಬದ್ಧವಾಗಿದ್ದು ಎಸ್ ಪಿ ಯವರ ಬೇಡಿಕೆಯಂತೆ ಪೊಲೀಸ್ ಸಿಬ್ಬಂದಿಗಳಿಗೆ ವಸತಿಗೃಹ ನಿರ್ಮಾಣ ಮಾಡಲು ಪ್ರಯತ್ನಿಸಲಾಗುವುದು. ಇದಕ್ಕಾಗಿ ಈ ವರ್ಷ ಸುಮಾರು 20 ರಿಂದ 25 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗುವುದು ಎಂದರು.
ಇದೆ ಸಂದರ್ಭದಲ್ಲಿ ವಿವಿಧ ಕ್ರೀಡೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನ ಪಡೆದ ಪೊಲೀಸ್ ತಂಡಗಳಿಗೆ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಪೊಲೀಸ್ ಪುರುಷ ಹಾಗೂ ಮಹಿಳಾ ಅಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು.




