ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಬೆಳ್ಳಿಗದೆ ನೀಡಿ ಸನ್ಮಾನ
ಬೆಂಳೂರು: ಗಾಂಧಿನಗರ ವಿಧಾನಸಭಾ ಕ್ಷೇತ್ರದ ಸುಭಾಶ್ ನಗರ ವಾರ್ಡ್ ನಲ್ಲಿ ಟಿ.ಮಲ್ಲೇಶ್ ಸಾಮಾಜಿಕ ಸೇವಾ ಸಂಸ್ಥೆ ವತಿಯಿಂದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸನ್ಮಾನ ಕಾರ್ಯಕ್ರಮ ನೆರವೇರಿತು.
ದಿನೇಶ್ ಗುಂಡೂರಾವ್ ಅವರಿಗೆ ಕುಮಾರಿ ಅನನ್ಯಾ ರಾವ್, ಮಹಾನಗರ ಪಾಲಿಕೆ ಮಾಜಿ ಸದಸ್ಯ ಟಿ.ಮಲ್ಲೇಶ್ ಬೆಳ್ಳಿಗದೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ಆಟೋ ಚಾಲಕರಿಗೆ ಸಮವಸ್ತ್ರ ಹಾಗೂ ಮಹಿಳೆಯರಿಗೆ ಕಂಬಳಿ ಮತ್ತು ಯುವ ಕ್ರೀಡಾಪಟುಗಳಿಗೆ ಸ್ಪೋರ್ಟ್ಸ್ ಕಿಟ್ ಗಳನ್ನು ವಿತರಿಸಲಾಯಿತು.
ಇದೇವೇಳೆ ಸನಸ್ಮಾನ ಸ್ವೀಕರಿಸಿ ಮಾತಾಡಿದ ದಿನೇಶ್ ಗುಂಡೂರಾವ್, ಅಧಿಕಾರ ಸಿಕ್ಕಾಗ ಜನರಿಗೆ ಒಳ್ಳೆಯ ಸೇವೆ ಮಾಡಬೇಕು. ಜನರ ಪ್ರೀತಿ ವಿಶ್ವಾಸಕ್ಕೆ ನಾನು ಋಣ ತೀರಿಸುವ ಕೆಲಸ ಮಾಡುತ್ತಿದ್ದೇನೆ. ಸ್ಲಂ ಪ್ರದೇಶದ ನಿವಾಸಿಗಳಿಗೆ ಹಕ್ಕುಪತ್ರ ಹಾಗೂ ನೋಂದಣಿ ಮಾಡಿಕೊಡಲು ಹಾಗೂ ರೈಲ್ವೆ ಅಂಡರ್ ಪಾಸ್ ನಿರ್ಮಾಣಕ್ಕೆ ರೈಲ್ವೆ ಅಧಿಕಾರಿಗಳ ಜೊತೆಯಲ್ಲಿ ಚರ್ಚೆ ಅನುದಾನ ಮೀಸಲು ಇಡಲಾಗಿದೆ ಎಂದರು.
ಸರ್ಕಾರದ ಗ್ಯಾರಂಟಿ ಯೋಜನೆ ಪ್ರತಿ ಕುಟುಂಬಗಳಿಗೆ ತಲುಪಿದೆ. ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ ಯೋಜನೆ ಬಡವರ ಪಾಲಿಗೆ ಆಶಾದೀಪವಾಗಿದೆ. ಒಳ್ಳೆಯ ಶಿಕ್ಷಣ ಮತ್ತು ಆರೋಗ್ಯ ಪ್ರತಿಯೊಬ್ಬರಿಗೂ ಲಭಿಸಬೇಕು ಮತ್ತು ಕಾಂಗ್ರೆಸ್ ಪಕ್ಷ ಬಡವರ ಪರ, ಅವರಿಗೆ ಸಹಾಯ ಮಾಡುವ ಸರ್ಕಾರವಾಗಿದೆ ಎಂದು ಹೇಳಿದರು.
ಟಿ.ಮಲ್ಲೇಶ್ ಮಾತನಾಡಿ, ಸಚಿವರಾದ ದಿನೇಶ್ ಗುಂಡೂರಾವ್ ಅವರು ಸರಳ, ಸಜ್ಜನ ರಾಜಕಾರಣಿ ಎಂದು ರಾಜ್ಯದಲ್ಲಿ ಕೀರ್ತಿ ಪಡೆದಿದ್ದಾರೆ. 6 ಬಾರಿ ಶಾಸಕರಾಗಿ ಉತ್ತಮ ಸೇವೆ ಮಾಡಿದ್ದಾರೆ. ನುಡಿದಂತೆ ನಡೆದ ಕಾಯಕಯೋಗಿ ದಿನೇಶ್ ಗುಂಡೂರಾವ್ ಅವರು ರೈಲ್ವೆ ಅಂಡರ್ ಪಾಸ್ ಹಾಗೂ ಹಕ್ಕುಪತ್ರ ಹಾಗೂ ಸ್ಲಂ ನಿವಾಸಿಗಳಿಗೆ ನೋಂದಣಿ ಮಾಡಿಸಲು ಕ್ರಮ ಕೈಗೊಂಡಿದ್ದಾರೆ. ದಿನೇಶ್ ಗುಂಡೂರಾವ್ ಅವರು ಮಂತ್ರಿಯಾಗಿ ಉತ್ತಮ ಸೇವೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸಲಿ ಎಂದು ರಾಜ್ಯದ ಜನರ ಆಶಯವಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸರವಣನ್, ಕಾಂಗ್ರೆಸ್ ಪಕ್ಷದ ಮುಖಂಡರಾದ ಅಡಪ್ಪ, ನಾರಾಯಣಸ್ವಾಮಿ, ಭಾನು ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಂಡಿದ್ದರು.




