ಬೆಂಗಳೂರು: ಬೆಂಗಳೂರಿನ ಎಂ.ಜಿ.ರಸ್ತೆ, ಕಮರ್ಷಿಯಲ್, ಬ್ರಿಗೇಡ್ ರಸ್ತೆಯಲ್ಲಿ ಓಡಾಡುವ ಮಹಿಳೆಯರೇ ಹುಷಾರ್… ನಿಮಗರಿವಿಲ್ಲದಂತೆ ನಿಮ್ಮ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುವ ವಿಕೃತರು ಸಕ್ರಿಯರಾಗಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಕಳೆದ ಕೆಲವು ದಿನಗಳ ಹಿಂದಷ್ಟೇ ಇಂತಹ ವಿಕೃತನೊಬ್ಬನನ್ನು ಪೊಲೀಸರು ಬಂಧಿಸಿ ಸೆರೆಮನೆಗೆ ತಳ್ಳಿದ ಬೆನ್ನಲ್ಲೇ ಇದೀಗ ಅಂತಹದ್ದೇ ವಿ ಕೃತ ಮನಸ್ಸಿನ ಮತ್ತೊಬ್ಬ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.
ಇನ್ ಸ್ಟಾಗ್ರಾಮ್ ನಲ್ಲಿ ಹೆಚ್ಚು ಲೈಕ್ ಗಳಿಸಲು ಅಸಭ್ಯವಾಗಿ ಕಾಣುವಂತೆ ಯುವತಿಯರ ಫೋಟೋ, ವಿಡಿಯೋ ತೆಗೆದು ಅದನ್ನು ಇನ್‌ಸ್ಟಾಗ್ರಾಮ್ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಪೋಸ್ಟ್ ಮಾಡುತ್ತಿದ್ದ ಯುವಕನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.
ಮಣಿಪುರದ ಇಂಪಾಲ್ ಮೂಲದ ದಿಲಾವರ್ ಹುಸೇನ್(19) ಬಂಧಿತ ಯುವಕನಾಗಿದ್ದಾನೆ. ಎಂ.ಜಿ.ರಸ್ತೆ, ಬ್ರಿಗೇಡ್ ರೋಡ್ ನಲ್ಲಿ ಯುವತಿಯರ ಅಸಭ್ಯ ರೀತಿಯಲ್ಲಿ ವಿಡಿಯೋ ತೆಗೆದು ಬಳಿಕ ಅಪ್ಲೋಡ್ ಮಾಡುತ್ತಿದ್ದ. ಈ ಸಂಬಂಧ ಅಶೋಕನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು.
ಕೊತ್ತನೂರಿನಲ್ಲಿ ವಾಸವಿದ್ದ ಆರೋಪಿ ಫುಡ್ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಆರೋಪಿಯು ದಿಲ್ಬರ್ ಜಾನಿ ಎಂಬ ಇನ್‌ಸ್ಟಾ ಖಾತೆಯಲ್ಲಿ ಯುವತಿಯರ ಅಸಭ್ಯ ಫೋಟೋಗಳನ್ನು ಅಪ್ಲೋಡ್ ಮಾಡುತ್ತಿದ್ದ.
ಎಂ.ಜಿ ರೋಡ್, ಬ್ರಿಗೇಡ್ ರೋಡ್‌ನಂತಹ ಜಾಗಗಳಲ್ಲಿ ರಾತ್ರಿ ಯುವತಿಯರ ಅನುಮತಿ ಇಲ್ಲದೆ ಫೋಟೋ, ವಿಡಿಯೋ ತೆಗೆದು ಬೆಂಗಳೂರು ನೈಟ್ ಲೈಫ್ ಎಂದು ಬರೆದು ಬಂಗಾಳಿ ಹಾಡುಗಳನ್ನು ಮಿಕ್ಸ್ ಮಾಡಿ ಇನ್ಸ್ಟಾದಲ್ಲಿ ಪೋಸ್ಟ್ ಮಾಡುತ್ತಿದ್ದ. ಈ ಸಂಬಂಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಅಶೋಕನಗರ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.



