ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ: ಜನಸಾಮಾನ್ಯರಿಗೆ ಮತ್ತೊಂದು ಹೊರೆ

3 hours ago

ನವದೆಹಲಿ/ ಬೆಂಗಳೂರು: ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ಸುಮಾರು ₹3ರಷ್ಟು ಏರಿಕೆ ಮಾಡಲಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆ ಹಿನ್ನೆಲೆ ತೈಲ ಕಂಪನಿಗಳು ಈ ನಿರ್ಧಾರ ಕೈಗೊಂಡಿವೆ.

ಕರ್ನಾಟಕದಲ್ಲಿಯೂ ಇಂಧನ ದರ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಪೆಟ್ರೋಲ್ ದರ ಸುಮಾರು ₹95.53 ಹಾಗೂ ಡೀಸೆಲ್ ದರ ₹94.10ಕ್ಕೆ ಏರಿಕೆಯಾಗಿದೆ.
ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚುವ ಸಾಧ್ಯತೆ ಇದ್ದು, ತರಕಾರಿ, ದಿನಸಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ. ಸಾಮಾನ್ಯ ಜನರು ಹಾಗೂ ವಾಹನ ಸವಾರರು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದರ ಮಧ್ಯೆ, ಪಂಚರಾಜ್ಯ ಚುನಾವಣೆಯ ಸಮಯದಲ್ಲಿ ಇಂಧನ ದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದ್ದ ಕೇಂದ್ರ ಸರ್ಕಾರ ಇದೀಗ ಬೆಲೆ ಹೆಚ್ಚಿಸಿರುವ ಕ್ರಮಕ್ಕೆ ಜನಸಾಮಾನ್ಯರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಚುನಾವಣೆ ಮುಗಿದ ತಕ್ಷಣವೇ ಪೆಟ್ರೋಲ್-ಡೀಸೆಲ್ ದರ ಏರಿಕೆ ಮಾಡಿರುವುದು ಜನರ ವಿಶ್ವಾಸಕ್ಕೆ ಧಕ್ಕೆ ತಂದಿದೆ ಎಂದು ಹಲವು ಮಂದಿ ಅಭಿಪ್ರಾಯಪಟ್ಟಿದ್ದಾರೆ.

Leave a Reply