ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್ ಮೇಲಿನ ಮೌಲ್ಯವರ್ಧಿತ ತೆರಿಗೆಯನ್ನು 29.84% ಗೆ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು 18.44% ಗೆ ಹೆಚ್ಚಳ ಮಾಡಿದೆ. ಈ ಏರಿಕೆಯ ನಂತರವೂ ನೆರೆ ರಾಜ್ಯಗಳಿಗಿಂತ ಕರ್ನಾಟಕದಲ್ಲಿ ಪೆಟ್ರೋಲ್ ಡೀಸೆಲ್ ಮಾರಾಟದ ಕಡಿಮೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ತೈಲ ಬೆಲೆ ಏರಿಕೆ ಹಿನ್ನೆಲೆಯಲ್ಲಿ ವಿಪಕ್ಷಗಳ ಆರೋಪಗಳ ಹಿನ್ನೆಲೆಯಲ್ಲಿ ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕರ್ನಾಟಕವು ತೈಲೋತ್ಪನ್ನಗಳ ಮೇಲೆ ವಿಧಿಸುತ್ತಿರುವ ತೆರಿಗೆಯು ದಕ್ಷಿಣ ಭಾರತದ ರಾಜ್ಯಗಳಿಗಿಂತ ಹಾಗೂ ನಮ್ಮ ರಾಜ್ಯದ ಆರ್ಥಿಕತೆಯ ಗಾತ್ರಕ್ಕೆ ಹೋಲುವ ಮಹಾರಾಷ್ಟ್ರ ರಾಜ್ಯಕ್ಕಿಂತಲೂ ಕಡಿಮೆಯಿದೆ ಎಂದಿದ್ದಾರೆ.
ಮಹಾರಾಷ್ಟ್ರದಲ್ಲಿ ಪೆಟ್ರೋಲ್ ಮೇಲೆ ಮೌಲ್ಯವರ್ಧಿತ ತೆರಿಗೆ ( ವ್ಯಾಟ್ ) 25% ಜೊತೆಗೆ ಹೆಚ್ಚುವರಿ ತೆರಿಗೆ ರೂ. 5.12 ಇದೆ. ಹಾಗೂ ಡೀಸೆಲ್ ಮೇಲೆ 21% ಇದೆ. ಇದಕ್ಕೆ ಹೋಲಿಸಿದರೆ ರಾಜ್ಯದ ಪರಿಷ್ಕೃತ ದರ ಕೂಡ ಜನರಿಗೆ ಹೊರೆಯಾಗದಂತಿದೆ ಎಂದಿದ್ದಾರೆ.
ಮೌಲ್ಯವರ್ಧಿತ ತೆರಿಗೆ ಹೆಚ್ಚಳದ ಹೊರತಾಗಿಯೂ, ರಾಜ್ಯದಲ್ಲಿ ಡೀಸೆಲ್ ಬೆಲೆ ಗುಜರಾತ್ ಹಾಗೂ ಮಧ್ಯಪ್ರದೇಶಗಳಿಗಿಂತ ಕಡಿಮೆಯಿದೆ. ಪೆಟ್ರೋಲಿಯಂ ಉತ್ಪನ್ನಗಳ ದರವು ಜನರಿಗೆ ಹೊರೆಯಾಗದ ರೀತಿಯಲ್ಲಿ ಲಭ್ಯವಾಗಿಸಲು ನಾವು ಬದ್ಧರಿದ್ದೇವೆ ಎಂದಿದ್ದಾರೆ.
ಬಿಜೆಪಿಯ ಡಬ್ಬಲ್ ಇಂಜಿನ್ ಸರ್ಕಾರದ ಅವಧಿಯಲ್ಲಿ ರಾಜ್ಯದ ಸಂಪನ್ಮೂಲಗಳನ್ನು ಇತರೆ ರಾಜ್ಯಗಳಿಗೆ ಹಂಚಿಕೆ ಮಾಡುವ ದುರುದ್ದೇಶದಿಂದ ಕೇಂದ್ರ ಸರ್ಕಾರ ರಾಜ್ಯದ ಬಿಜೆಪಿ ಸರ್ಕಾರವನ್ನು ಬಳಸಿಕೊಂಡು ಕರ್ನಾಟಕದಲ್ಲಿ ಮೌಲ್ಯವರ್ಧಿತ ತೆರಿಗೆ ದರವನ್ನು ಕಡಿತಗೊಳಿಸುವಂತೆ ಮಾಡಿ, ತನ್ನ ಪಾಲಿನ ತೆರಿಗೆ ಹೆಚ್ಚಳ ಮಾಡುವ ಮೂಲಕ ಲಕ್ಷಾಂತರ ಕೋಟಿ ಸಂಗ್ರಹಿಸಿತ್ತು ಎಂದಿದ್ದಾರೆ.
ಈ ಅನರ್ಥ ನೀತಿಯಿಂದಾಗಿ ರಾಜ್ಯದ ರಾಜಸ್ವ ಸಂಗ್ರಹಕ್ಕೆ ದೊಡ್ಡ ಹೊಡೆತ ಬಿದ್ದರೆ, ಇದೇ ವೇಳೆ ಕೇಂದ್ರವು ಕನ್ನಡಿಗರಿಗೆ ದ್ರೋಹ ಬಗೆದು ಭರಪೂರ ತೆರಿಗೆ ಸಂಗ್ರಹಿಸಿತ್ತು ಎಂದು ಆರೋಪಿಸಿದ್ದಾರೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ರೂ. 9.21 ರಿಂದ ರೂ. 32.98 ಗೆ ಹಾಗೂ ಡೀಸೆಲ್ ಮೇಲೆ ರೂ. 3.45 ರಿಂದ ರೂ. 31.84 ಕ್ಕೆ ಹೆಚ್ಚಳ ಮಾಡಿತ್ತು. ಇದು ನಿಜವಾಗಿಯೂ ಜನರ ಮೇಲಿನ ಹೊರೆ ಎಂದಿದ್ದಾರೆ.
ಆಗಾಗ್ಗೆ ಕೇಂದ್ರ ಸರ್ಕಾರವು ತೆರಿಗೆ ಕಡಿತಗೊಳಿಸಿದ ಹೊರತಾಗಿಯೂ ಈಗಿನ ಅಬಕಾರಿ ಸುಂಕವು ಪೆಟ್ರೋಲ್ ಮೇಲೆ ರೂ. 19.9 ಹಾಗೂ ಡೀಸೆಲ್ ಮೇಲೆ ರೂ. 15.8 ಇದೆ. ನರೇಂದ್ರ ಮೋದಿ ಅವರ ಸರ್ಕಾರ ಜನಹಿತದ ದೃಷ್ಟಿಯಿಂದ ಈ ತೆರಿಗೆಯನ್ನು ಇಳಿಕೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.




