
ದೇಶದಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಮತ್ತೆ ಏರಿಕೆ ಮಾಡಲಾಗಿದ್ದು, ಲೀಟರ್‌ಗೆ ಸುಮಾರು 90 ಪೈಸೆ ಹೆಚ್ಚಳವಾಗಿದೆ. ಕಳೆದ ಒಂದು ವಾರದೊಳಗೆ ಇದು ಎರಡನೇ ಬಾರಿ ಇಂಧನ ದರ ಏರಿಕೆಯಾಗಿರುವುದು ವಾಹನ ಸವಾರರ ಆತಂಕಕ್ಕೆ ಕಾರಣವಾಗಿದೆ.
ಇದರಿಂದಾಗಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹107.12ಕ್ಕೆ ಏರಿಕೆಯಾದರೆ, ಡೀಸೆಲ್ ದರದಲ್ಲೂ ಏರಿಕೆ ಕಂಡುಬಂದಿದೆ. ಕಳೆದ ಕೆಲ ದಿನಗಳಲ್ಲೇ ಇಂಧನ ದರದಲ್ಲಿ ₹3ಕ್ಕೂ ಹೆಚ್ಚು ಹೆಚ್ಚಳವಾಗಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ.
ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ, ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ ಹಾಗೂ ತೈಲ ಕಂಪನಿಗಳ ಮೇಲಿನ ಆರ್ಥಿಕ ಒತ್ತಡದ ಹಿನ್ನೆಲೆ ಈ ದರ ಪರಿಷ್ಕರಣೆ ಮಾಡಲಾಗಿದೆ ಎಂದು ವರದಿಗಳು ತಿಳಿಸಿವೆ. ಇಂಧನ ದರ ಏರಿಕೆಯಿಂದ ಸಾರಿಗೆ ವೆಚ್ಚ ಹೆಚ್ಚಳವಾಗುವ ಸಾಧ್ಯತೆ ಇದ್ದು, ಅಗತ್ಯ ವಸ್ತುಗಳ ಬೆಲೆಯ ಮೇಲೂ ಪರಿಣಾಮ ಬೀರುವ ಆತಂಕ ವ್ಯಕ್ತವಾಗಿದೆ.
#petrolhike #indiangoverment #benagaluru #bjp #pmmodi #malgudinews #commobmanlife #malgudiexpressnees
|Like|Share|Comment|Subscribe|




