ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ರಾಜ್ಯವ್ಯಾಪಿ ಪ್ರತಿಭಟನೆ

5 years ago

ಬೆಂಗಳೂರು: ಪೆಟ್ರೋಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿರುವುದನ್ನು ವಿರೋಧಿಸಿ 5 ದಿನಗಳ ರಾಜ್ಯವ್ಯಾಪಿ ಪ್ರತಿಭಟನೆಯನ್ನು ಕೆಪಿಸಿಸಿ ಆಯೋಜಿಸಿದೆ.

ಇದರ ಭಾಗವಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಗಾಂಧಿನಗರ ಕ್ಷೇತ್ರದ ರೆಡ್ಡಿ ಪೆಟ್ರೋಲ್ ಬಂಕ್ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವರಾದ ಆರ್.ವಿ ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ಈ ಪ್ರತಿಭಟನೆಯನ್ನು ಇಂದು ಆರಂಭಿಸಲಾಗಿದ್ದು, ಹಂತ-ಹಂತವಾಗಿ ರಾಜ್ಯಾದ್ಯಂತ ಐದು ದಿನಗಳ ಕಾಲ 5000ಕ್ಕೂ ಹೆಚ್ಚು ಪೆಟ್ರೋಲ್ ಬಂಕ್‌ಗಳ ಮುಂದೆ ನಡೆಸಲು ಕೆಪಿಸಿಸಿ ನಿರ್ಧರಿಸಿದೆ.

Leave a Reply