ಅಟಲ್ ಬಿಹಾರಿ ವಾಜಪೇಯಿ ಜೀವನ ಚರಿತ್ರೆ ಸಾರುವ ಛಾಯಾಚಿತ್ರ ಪ್ರದರ್ಶನ
ಬಿಜೆಪಿ ಹಿರಿಯ ಮುಖಂಡರುಗಳಿಗೆ ಸನ್ಮಾನ ಕಾರ್ಯಕ್ರಮ
ಬೆಂಗಳೂರು: ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ:ಯ ಬಿಜೆಪಿ ಜನಸಂಪರ್ಕ ಕಛೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿರವರ 100ನೇ ಹುಟ್ಟುಹಬ್ಬದ ಪ್ರಯುಕ್ತ ಸುಶಾಸನ ದಿನ, ಅಟಲ್ ಜೀ ಜೀವನ ಚರಿತ್ರೆಯ ಛಾಯಾಚಿತ್ರ ಪ್ರದರ್ಶನ ಮತ್ತು ಬಿಜೆಪಿ ಹಿರಿಯ ಮುಖಂಡರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ದಕ್ಷ್ಮಿಣ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ, ಕೆ.ಉಮೇಶ್ ಶೆಟ್ಟಿ, ಪಾಲಿಕೆ ಮಾಜಿ ಸದಸ್ಯರುಗಳಾದ ಗಂಗಭೈರಯ್ಯ, ರಾಮಪ್ಪ, ಜಯರತ್ನರವರು ದೀಪ ಬೆಳಗಿಸಿ, ಅಟಲ್ ಜೀರವರ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ ಮಾಡಿದರು.
ಕೆ.ಉಮೇಶ್ ಶೆಟ್ಟಿ ಮಾತನಾಡಿ ಅಜಾತಶತ್ರು, ಸರ್ವಶೇಷ್ಠ ರಾಜಕಾರಣಿ ಅಟಲ್ ಬಿಹಾರಿ ವಾಜಪೇಯಿರವರ 100ನೇ ವರ್ಷದ ಹುಟ್ಟುಹಬ್ಬದ ಶುಭದಿನವನ್ನು ಸುಶಾಸನ ದಿನವಾಗಿ ಅಚರಿಸಲಾಗುತ್ತಿದೆ. ಬಿಜೆಪಿ ಪಕ್ಷ ದೇಶ ಮೊದಲು ಎಂದು ರಾಷ್ಟ್ರ ಭಕ್ತಿ ಕಲಿಸಿದ ಪಕ್ಷ ಎಂದರು.
ಸುಶಾಸನ ದಿನದ ಶುಭ ಸಂದರ್ಭದಲ್ಲಿ ಬಿಜೆಪಿ ಪಕ್ಷದಲ್ಲಿ ಸೇವೆ ಸಲ್ಲಿಸುತ್ತಿರುವ ಬಿಜೆಪಿ ಹಿರಿಯ ಮುಖಂಡರುಗಳಾದ ವಿಶ್ವನಾಥ, ಗಂಗಭೈರಯ್ಯ, ಶಿವರಾಂ, ಗೌರಮ್ಮ ರವರಿಗೆ ಸನ್ಮಾನಿಸಲಾಗುತ್ತಿದೆ ಎಂದರು.
ಅಟಲ್ ಜೀ ಹೆಸರಿನಲ್ಲಿ ಶಕ್ತಿ ಇದೆ, ಮೂರು ಬಾರಿ ದೇಶದ ಪ್ರಧಾನಿಯಾಗಿ ಉತ್ತಮ ಆಡಳಿತ ನೀಡಿದರು. ಕಾಶ್ಮೀರದಿಂದ ಕನ್ಯಾಕುಮಾರಿವರಗೆ ಉತ್ತಮ ರಸ್ತೆಗಳು ಇದೆ ಎಂದರೆ ಅಟಲ್ ಜೀ ನೀಡಿದ ಉತ್ತಮ ಆಡಳಿತ ಕಾರಣ. ಕವಿ, ಸಾಹಿತಿ, ಪತ್ರಕರ್ತ ಶೇಷ್ಠ ರಾಜಕಾರಣಿಯಾಗಿ ದೇಶದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದರು. ಅಟಲ್ ಜೀರವರು ಕಟ್ಟಿಬೆಳಸಿದ ಪಕ್ಷದಲ್ಲಿ ಲಕ್ಷಾಂತರ ಜನ ಇಂದು ನಾಯಕರಾಗಿ ಹೊರಹೊಮ್ಮಿದ್ದಾರೆ ಎ.
ಪಕ್ಷ ಕಟ್ಟಲು ನಾಯಕರಿಂದ ಮಾತ್ರ ಸಾಧ್ಯವಿಲ್ಲ, ಕಾರ್ಯಕರ್ತರು ಮುಖ್ಯ. ಗೋವಿಂದರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನ ಯಶ್ವಸಿಯಾಗಿ ನೆರವೇರಿದೆ. ಅಟಲ್ ಬಿಹಾರಿ ವಾಜಪೇಯಿ, ನರೇಂದ್ರಮೋದಿ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪರವರು ಸಾಮಾನ್ಯ ಕಾರ್ಯಕರ್ತರಾಗಿದ್ದರು. ಬಿಜೆಪಿ ಪಕ್ಷದಲ್ಲಿ ಸಾಮಾನ್ಯ ಕಾರ್ಯಕರ್ತನು ಸಹ ಉನ್ನತ ಸ್ಥಾನ ಅಲಂಕರಿಸಬಹುದು. ಕಾರ್ಯಕರ್ತನೆ ಪಕ್ಷದ ಜೀವಾಳ ಎಂದರು.
ಪ್ರಧಾನಿ ನರೇಂದ್ರಮೋದಿರವರ ನೇತೃತ್ವದಲ್ಲಿ 70 ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅಯುಷ್ಮಾನ್ ಭಾರತ್ ಯೋಜನೆ ಅಡಿ 5 ಲಕ್ಷ ರೂಪಾಯಿ ವರೆಗೆ ಉಚಿತವಾಗಿ ವೈದ್ಯಕೀಯ ಚಿಕಿತ್ಸೆಯ ಹೆಲ್ತ್ ಕಾರ್ಡ್ ಸಹ ವಿತರಿಸಲಾಗುತ್ತಿದೆ ಎಂದರು.
ಬಿಜೆಪಿ ಮುಖಂಡರುಗಳಾದ ಡೊಡ್ಡಯ್ಯ, ಲಕ್ಷ್ಮಿನಾರಾಯಣ್, ಜಯದೇವ, ಶಾಮಣ್ಣ, ಮೋಹನ್ ಕುಮಾರ್, ಶಿವಣ್ಣ, ಆರ್.ವೆಂಕಟೇಶ್, ಬಿಜೆಪಿ ಕಾರ್ಯಕರ್ತರು ಹಾಜರಿದ್ದರು.








