ಚುನಾವಣೆಯಲ್ಲಿ ಸೋತಾಗ ಇವಿಎಂ ತಿರುಚಲಾಗುತ್ತದೆ ಎನ್ನುತ್ತೀರಿ, ಗೆದ್ದಾಗ ಏನೂ ಹೇಳುವುದಿಲ್ಲ ಎಂದ ವಿಭಾಗೀಯ ಪೀಠ
ದೆಹಲಿ: ಮತಯಂತ್ರಗಳ (ಇವಿಎಂ) ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂ ನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾದಂತಾಗಿದೆ.
ಈ ಹಿಂದೆ ಆಂಧ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಜಗನ್ ಮೋಹನ್ ರೆಡ್ಡಿ ಇತ್ತೀಚಿನ ಚುನಾವಣೆಗಳಲ್ಲಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂಗಳನ್ನು ತಿರುಚಬಹುದು ಎಂಬ ಆರೋಪ-ಪ್ರತ್ಯಾರೋಪಗಳನ್ನು ಸ್ಮರಿಸಿದ ನ್ಯಾಯಮೂರ್ತಿಗಳು, ಅರ್ಜಿದಾರರ ವಾದವನ್ನು ತಳ್ಳಿಹಾಕಿದರು.
ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು.
ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.
ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ, ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತು. ಅಲ್ಲದೆ, ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿ ಆದೇಶಿಸಿತು.




