ಪಿಣರಾಯಿ ವಿಜಯನ್ ವಾಸ್ತವ ಸಂಗತಿಗಳ ಅರಿವಿಲ್ಲದೆ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ: ಸಿದ್ದರಾಮಯ್ಯ
ಬೆಂಗಳೂರಿನ ಯಲಹಂಕ ಸಮೀಪದ ಕೋಗಿಲು ಬಡಾವಣೆಯ ತ್ಯಾಜ್ಯ ವಿಲೇವಾರಿ ಸ್ಥಳದಲ್ಲಿ ಹಲವರು ಅತಿಕ್ರಮವಾಗಿ ಗುಡಿಸಲು ನಿರ್ಮಿಸಿಕೊಂಡಿದ್ದರು, ಅದು ಜನ ವಸತಿಗೆ ಯೋಗ್ಯವಾದ ಸ್ಥಳವಾಗಿರಲಿಲ್ಲ. ಅಲ್ಲಿನ ಕುಟುಂಬಗಳಿಗೆ ಹಲವು ಬಾರಿ ಬೇರೆಡೆಗೆ ಸ್ಥಳಾಂತರ ಆಗುವಂತೆ ನೋಟೀಸ್ ನೀಡಿದ್ದರೂ ಅವರು ಸ್ಪಂದಿಸಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಅವರನ್ನು ಆ ಜಾಗದಿಂದ ತೆರವುಗೊಳಿಸಲಾಗಿದೆ.
- ಕಳ್ಳಾಟ ಇಲ್ಲದಿದ್ದರೆ ಮುಚ್ಚಿಡುವುದಕ್ಕೇನಿದೆ?
- ಮೊದಲ ಸಿನಿಮಾ ಚಿತ್ರ ಬಿಡುಗಡೆ ನೆನಪು ಮಾಡಿಕೊಂಡ ಅನಿರುದ್ಧ
- ಮಲೆನಾಡ ಶೈಲಿಯ ಬಿಸಿಬಿಸಿ ‘ನೀರುಪ್ಪಿಟ್ಟು’ ಮಾಡುವ ವಿಧಾನ
- ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅರ್ಜಿ ಆಹ್ವಾನ
- ಎಸ್ಐಆರ್ ರಾಜಕೀಯಕ್ಕೆ ಬಳಕೆ ಸರಿಯಲ್ಲ: ಡಿ ಕೆ ಶಿವಕುಮಾರ್
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಕಮಿಷನರ್ ಅವರ ಜೊತೆ ಮಾತನಾಡಿ, ಅವರೆಲ್ಲರಿಗೂ ತಾತ್ಕಾಲಿಕ ಆಶ್ರಯ, ಊಟ ಇನ್ನಿತರೆ ವ್ಯವಸ್ಥೆ ಮಾಡಿಕೊಡುವಂತೆ ಸೂಚನೆ ನೀಡಿದ್ದೇನೆ. ಅಲ್ಲಿ ಅತಿಕ್ರಮವಾಗಿ ವಾಸವಿದ್ದ ಬಹುತೇಕರು ವಲಸೆ ಕಾರ್ಮಿಕರು, ಸ್ಥಳೀಯ ನಿವಾಸಿಗಳಲ್ಲ, ಆದರೂ ಕೂಡ ಮಾನವೀಯತೆ ದೃಷ್ಟಿಯಿಂದ ಅವರಿಗೆ ಸೂಕ್ತ ವಸತಿ ವ್ಯವಸ್ಥೆ ಮಾಡಿಕೊಡುತ್ತೇವೆ.
ಬುಲ್ಡೋಜರ್ ನ್ಯಾಯಕ್ಕೂ, ಅಕ್ರಮ ಒತ್ತುವರಿ ತೆರವಿಗೂ ಅಜಗಜಾಂತರ ವ್ಯತ್ಯಾಸವಿದೆ. ಪಿಣರಾಯಿ ವಿಜಯನ್ ಅವರು ವಾಸ್ತವ ಸಂಗತಿಗಳ ಅರಿವಿಲ್ಲದೆ ರಾಜಕೀಯ ಕಾರಣಕ್ಕಾಗಿ ಟೀಕೆ ಮಾಡುತ್ತಿದ್ದಾರೆ.
– ಸಿದ್ದರಾಮಯ್ಯ, ಸಿಎಂ




