ಬೆಂಗಳೂರು: ಮತ್ತೊಮ್ಮೆ ದೇಶದ ಪ್ರಧಾನಿಯಾಗುವ ಮೂಲಕ ಹೊಸ ದಾಖಲೆ ಬರೆಯಬೇಕು ಎಂದು ಸಜ್ಜುಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನಾಳೆ ಕರ್ನಾಟಕದಿಂದ ಬಿಜೆಪಿ ಲೋಕಸಭಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ. ಅವರು ಇಂದು ಎ ಐ ಸಿ ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಇದಕ್ಕಾಗಿ ಕಲಬುರಗಿಯ ಎನ್ ಎಂ ಆರ್ ವಿ ಕಾಲೇಜು ಮೈದಾನದಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಪ್ರಧಾನಿ ಕಾರ್ಯಕ್ರಮಕ್ಕೆ ಅಂದಾಜು ಮೂರು ಲಕ್ಷಕ್ಕೂ ಹೆಚ್ಚಿನ ಕಾರ್ಯಕರ್ತರನ್ನು ಸೇರಿಸಲು ಸಂಘಟಕರು ಸಿದ್ಧತೆ ನಡೆಸಿದ್ದಾರೆ.
ಕರ್ನಾಟಕದ ಕಲಬುರಗಿ, ರಾಯಚೂರು, ಬಿಜಾಪುರ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ ಸೇರಿದಂತೆ ಕಲ್ಯಾಣ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ಜೊತೆಗೆ ನೆರೆಯ ಮಹಾರಾಷ್ಟ್ರ ಮತ್ತು ತೆಲಂಗಾಣದ ಕೆಲವು ಕ್ಷೇತ್ರಗಳನ್ನು ಗುರಿಯಾಗಿಟ್ಟುಕೊಂಡು ಮೋದಿಯವರು ಬಿಜೆಪಿ ಪರ ಪ್ರಚಾರ ನಡೆಸಲಿದ್ದಾರೆ.
ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಬಿಜೆಪಿ ನಾಯಕರು ಭಾಗಿಯಾಗಲಿದ್ದಾರೆ.
ಮೋದಿ ಅವರು ನಾಳೆ ಕಲಬುರಗಿಯಲ್ಲಿ ಬಹಿರಂಗ ಪ್ರಚಾರಕ್ಕೆ ಚಾಲನೆ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಜೆ ದೆಹಲಿಯಲ್ಲಿ ನಿಗದಿಯಾಗಿದ್ದ ಬಿಜೆಪಿ ಚುನಾವಣಾ ಸಮಿತಿ ಸಭೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.




