ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ

7 hours ago

ಅಂತರಶಾಲಾ ಮೋದಿ ವಾಲಿಬಾಲ್ ಕಪ್-2026 ಮತ್ತು ಕ್ರೀಡಾಂಗಣ ಲೋಕಾರ್ಪಣೆ

ಬೆಂಗಳೂರು: ರಾಜಾಜಿನಗರ ವಿಧಾನಸಭಾ ಕ್ಷೇತ್ರದ ದಯಾನಂದನಗರ ವಾರ್ಡ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಸಂಕಲ್ಪ ಕಾರ್ಯಕ್ರಮದಲ್ಲಿ ನವೀಕರಣಗೊಂಡ ಕ್ರೀಡಾಂಗಣ ಮತ್ತು ಅಂತರಶಾಲಾ ಮೋದಿ ಕಪ್ ವಾಲಿಬಾಲ್ ಪಂದ್ಯಾವಳಿ ಮತ್ತು ಪೌರ ಕಾರ್ಮಿಕ ಮಹಿಳೆಯರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಶಾಸಕ ಎಸ್.ಸುರೇಶ್ ಕುಮಾರ್ ಉದ್ಘಾಟನೆ ಮಾಡಿ, ವಾಲಿಬಾಲ್ ಪಂದ್ಯಗಳಿಗೆ ಚಾಲನೆ ನೀಡಿದರು. ಬಿಬಿಎಂಪಿ ಮಾಜಿ ಸದಸ್ಯರುಗಳಾದ ಎಂ.ಮುನಿರಾಜು, ಶ್ರೀಮತಿ ಶಕೀಲ ಮುನಿರಾಜು, ಮಂಡಲ ಬಿಜೆಪಿ ಕಾರ್ಯದರ್ಶಿ ಎಂ.ಎಸ್.ಸಂಜಯ್ ಕುಮಾರ್ ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಎಸ್.ಸುರೇಶ್ ಕುಮಾರ್, ಪ್ರಧಾನಿ ನರೇಂದ್ರ ಮೋದಿರವರು ದೇಶದ ಜನರಿಗೆ ಪ್ರಧಾನ ಸೇವಕರಾಗಿ ಕೆಲಸ ಮಾಡುತ್ತಿದ್ದಾರೆ. ಎರಡು ಬಾರಿ ಮುಖ್ಯಮಂತ್ರಿ ಮೂರು ಬಾರಿ ಪ್ರಧಾನಿಯಾಗಿ ದೇಶದ ಬಲಿಷ್ಠ ರಾಷ್ಟ್ರವಾಗಿ ಮಾಡಿದ್ದಾರೆ ಎಂದರು.

ಇಂದು ನರೇಂದ್ರ ಮೋದಿರವರ ಹುಟ್ಟುಹಬ್ಬದ ಅಂಗವಾಗಿ ಸೇವಾ ಸಂಕಲ್ಪ ಅಂಗವಾಗಿ ಅಂತರಶಾಲಾ ವಾಲಿಬಾಲ್ ಪಂದ್ಯಾವಾಳಿ ಮತ್ತು ನವೀಕರಣಗೊಂಡ ಕ್ರೀಡಾಂಗಣ, ಶುದ್ದ ಕುಡಿಯುವ ನೀರಿನ ಘಟಕ, 500 ಕ್ಯಾನ್ ವಿತರಣೆ ಹಾಗೂ ಪೌರ ಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ಮಾಡಲಾಯಿತು ಎಂದರು.

ನರೇಂದ್ರ ಮೋದಿರವರು ಆಡಳಿತದಲ್ಲಿ ದೇಶ ಸುಭದ್ರವಾಗಿದೆ. ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದ್ದಾರೆ. ಕೊರೋನ ಸಂದರ್ಭದಲ್ಲಿ ದೇಶದ ಜನರ ಜೀವ ಉಳಿಸಿದ್ದಾರೆ. ಆಪರೇಷನ್ ಸಿಂಧೂರ ಮೂಲಕ ಭಾರತದ ಸೈನಿಕರ ಬಲವನ್ನು ವಿಶ್ವಕ್ಕೆ ಪರಿಚಯಿಸಿದ್ದಾರೆ ಎಂದರು.

ಕೇಂದ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಘವೇಂದ್ರರಾವ್ ಮಂಡಲದ ಅಧ್ಯಕ್ಷ ಸುದರ್ಶನ್, ಪ್ರಧಾನ ಕಾರ್ಯದರ್ಶಿ ಗಿರೀಶ್ ಗೌಡ ಮತ್ತು ಸ್ಥಳೀಯ ಬಿಜೆಪಿ ಮುಖಂಡರು ಹಾಜರಿದ್ದರು.

ಪೌರ ಕಾರ್ಮಿಕ ಮಹಿಳೆಯರಿಂದ ಶ್ರೀ ದೇವಿ ಗಂಗಮ್ಮ ಶುದ್ದ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಿ, 20 ಲೀಟರ್ ಸಾಮರ್ಥ್ಯದ 500 ನೀರಿನ ಕ್ಯಾನ್ ಗಳನ್ನು ಸಾರ್ವಜನಿಕರಿಗೆ ವಿತರಿಸಲಾಯಿತು.

Leave a Reply