ಬಿಟ್ಟಿ ಪೆನ್ಷನ್ ಅಲ್ಲ; ವಂತಿಗೆ ಕೊಡಿರಲ್ಲ!
ಯಾವುದೇ ಕಾರಣಕ್ಕೂ ಬಿಟ್ಟಿಯಲ್ಲ PMSYM!
ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಯೋಜನಾ (ಪಿಎಮ್-ಎಸ್‌ವೈಎಂ)
ಭಾರತ ದೇಶದ ಅರ್ಧದಷ್ಟು ಆದಾಯವು ಅಸಂಘಟಿತ ವಲಯದ 42 ಕೋಟಿ ಕಾರ್ಮಿಕರಿಂದ ಉತ್ಪಾದನೆಯಾಗುತ್ತಿದೆ. ನಮ್ಮ ದೈನಂದಿನ ಜೀವನದಲ್ಲಿ ಬೀದಿ ವ್ಯಾಪಾರಿಗಳು, ರಿಕ್ಷಾ ಎಳೆಯುವವರು, ಕಟ್ಟಡ ಕಾರ್ಮಿಕರು, ಮನೆಕೆಲಸದವರು, ಕೃಷಿ ಕಾರ್ಮಿಕರು, ಕಸ ಹೆಕ್ಕುವವರು, ಬೀಡಿ ಕಾರ್ಮಿಕರು, ಹ್ಯಾಡ್‍ಲೂಮ್ ಕಾರ್ಮಿಕರು, ಚರ್ಮೋದ್ಯಮ, ಚಿಂದಿ ಆಯುವವರು ಮತ್ತು ಇತರೇ ವಿವಿಧ ವೃತ್ತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಸಂಘಟಿತ ಕಾರ್ಮಿಕರು ಕಂಡು ಬರುತ್ತಾರೆ.
ಈ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ರಕ್ಷಣೆ ಕಲ್ಪಿಸಲು ಪಿಂಚಣಿ ಸೌಲಭ್ಯವನ್ನು ವಿಸ್ತರಿಸಿ ಭಾರತ ಸರ್ಕಾರವು ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ (ಪಿಎಮ್-ಸಿಮ್) ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಜಾರಿಗೆ ತಂದಿರುತ್ತದೆ.
ಯೋಜನೆಗೆ ಸೇರಲು ಅರ್ಹತೆಗಳು:
18 ರಿಂದ 40 ವರ್ಷದೊಳಗಾಗಿರಬೇಕು.
ಅವರ ಮಾಸಿಕ ಆದಾಯ ರೂ.15,000/ ಅಥವಾ ಅದಕ್ಕಿಂತ ಕಡಿಮೆ ಇರಬೇಕು.
ಆದಾಯ ತೆರಿಗೆ ಪಾವತಿಸುವವರಾಗಿರಬಾರದು.
ಸಂಘಟಿತ ವಲಯದ ಕಾರ್ಮಿಕರಾಗಿರಬಾರದು ಹಾಗೂ ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆಗೆ ಒಳಪಟ್ಟಿರಬಾರದು.
ಯೋಜನೆ ನೋಂದಣಿ ವಿಧಾನಗಳು:
ಅರ್ಹ ಫಲಾನುಭವಿಗಳು ಹತ್ತಿರದ “ಸಾಮಾನ್ಯ ಸೇವಾ ಕೇಂದ್ರ (ಸಿ.ಎಸ್.ಸಿ)” ಗಳಲ್ಲಿ ಯೋಜನೆಯಡಿ ನೋಂದಾಯಿಸಬಹುದಾಗಿರುತ್ತದೆ. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ. ಶಾಖೆಗಳು, ಕಾರ್ಮಿಕ ಇಲಾಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್.ಐ. ಕಾರ್ಪೋರೇಷನ್, ಹಾಗೂ ಭವಿಷ್ಯನಿಧಿ ಇಲಾಖೆ ಹಾಗೂ ಅವರ ವೆಬ್ ವಿಳಾಸಗಳು ಹಾಗೂ ವೆಬ್ ವಿಳಾಸ http://locator.csccloud.in ಗಳಲ್ಲಿ ಪಡೆಯಬಹುದಾಗಿರುತ್ತದೆ.
ಫಲಾನುಭವಿಗಳು ತಮ್ಮೊಂದಿಗೆ ಆಧಾರ್ ಕಾರ್ಡ್, ಬ್ಯಾಂಕ್ ಖಾತೆ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ (ಬ್ಯಾಂಕ್ ಪಾಸ್ ಪುಸ್ತಕ/ಚೆಕ್ ಪುಸ್ತಕ/ಬ್ಯಾಂಕ್ ಸ್ಟೇಟ್‍ಮೆಂಟ್) ಮತ್ತು ಮೊಬೈಲ್‍ನೊಂದಿಗೆ ಕಾಮನ್ ಸರ್ವಿಸ್ ಸೆಂಟರ್‍ಗಳಿಗೆ ತೆರಳುವುದು.
ಅನುಬಂಧಲ್ಲಿ ತಿಳಿಸಿರುವಂತೆ ವಯಸ್ಸಿಗೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸಲು ತೆರಳುವುದು. ತದ ನಂತರ ಮಾಸಿಕ ವಂತಿಕೆಯನ್ನು ಅವರ ಖಾತೆಯಿಂದ ಆಟೋ-ಡೆಬಿಟ್ ಮಾಡಲಾಗುವುದು.
ಯೋಜನೆಯ ಸೌಲಭ್ಯಗಳು
ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಾವತಿಸುತ್ತದೆ.
60 ವರ್ಷ ಪೂರ್ಣಗೊಂಡ ನಂತರ ಚಂದಾದಾರರು (ಫಲಾನುಭವಿಯು) ತಿಂಗಳಿಗೆ ನಿಶ್ಚಿತ ರೂ.3,000/-ಗಳ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ.
ಪಿಂಚಣಿ ಆರಂಭಗೊಂಡ ನಂತರ ಚಂದಾದಾರರು ಮೃತ ಪಟ್ಟಲ್ಲಿ ಅವರ ಪತ್ನಿ/ಪತಿ ಪಿಂಚಣಿಯ ಶೆ.50 ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರು.
ಫಲಾನುಭವಿಯು ನಿರಂತರವಾಗಿ ವಂತಿಕೆಯನ್ನು ಪಾವತಿಸಿದ್ದು ಅವರು 60 ವರ್ಷದ ಒಳಗಾಗಿ ಮೃತ ಪಟ್ಟಲ್ಲಿ ಅವನು/ಅವಳ ಸಂಗಾತಿಯು ತದನಂತರವೂ ಯೋಜನೆಗೆ ಸೇರಬಹುದಾಗಿದ್ದು ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ.
ಚಂದಾದಾರರು ಯೋಜನೆಯಿಂದ 60 ವರ್ಷ ಪೂರ್ವದಲ್ಲೇ (ಮಧ್ಯದಿಂದಲೇ) ನಿರ್ಗಮಿಸಿದಲ್ಲಿ ಅವರು ಪಾವತಿಸಿರುವ ವಂತಿಕೆಯನ್ನು ಮಾತ್ರ ಬಡ್ಡಿಯೊಂದಿಗೆ ಹಿಂಪಡೆಯಲು ಅರ್ಹರಾಗಿರುತ್ತಾರೆ.
ಪ್ರಧಾನ ಮಂತ್ರಿ ಶ್ರಮ್ ಯೋಗಿ ಮಾನ್-ಧನ್ ಯೋಜನೆ ವಂತಿಕೆಯ ಚಾರ್ಟ್‍ನ ವಿವರಗಳು
ವಯಸ್ಸು ಮಾಸಿಕ ವಂತಿಕೆ ಕೇಂದ್ರ ಸಮಾನಾಂತರ ಮಾಸಿಕ ವಂತಿಕೆ ಒಟ್ಟು

ಪ್ರವೇಶದ ವಯಸ್ಸು, ವಯೋನಿವೃತ್ತಿಯ ವಯಸ್ಸು, ಸದಸ್ಯರ ಮಾಸಿಕ ವಂತಿಕೆ ಪಾವತಿ, ಕೇಂದ್ರ ಸರ್ಕಾರದ ಸಮಾನಾಂತರ ಮಾಸಿಕ ವಂತಿಕೆ ಪಾವತಿ ಮೊತ್ತದ ಮೇಲೆ ವಂತಿಗೆಯು ನಿರ್ಧಾರವಾಗುತ್ತದೆ.
ನೋಂದಣಿ ಮಾಡುವ ಪ್ರಕ್ರಿಯೆಯ ವಿಧಾನಗಳು
ಫಲಾನುಭವಿಯು ಅಗತ್ಯ ಮಾಹಿತಿಯೊಂದಿಗೆ ಕಾಮನ್ ಸರ್ವೀಸ್ ಸೆಂಟರ್‍ಗೆ (ಸಿಎಸ್‍ಸಿ) ತೆರಳುವುದು.
ಸಿಎಸ್‍ಸಿಯು ಫಲಾನುಭವಿಯನ್ನು ನೋಂದಾಯಿಸುವುದು.
ವಯಸ್ಸಿನ ಆಧಾರದ ಮೇಲೆ ವಂತಿಕೆಯು ಸ್ವಯಂ ಲೆಕ್ಕಾಚಾರ ಮಾಡಲಾಗುತ್ತದೆ.
ಪ್ರಥಮ ಕಂತನ್ನು ನಗದು ರೂಪ ಅಥವಾ ವ್ಯಾಲೆಟ್ ಮೂಲಕ ಪಾವತಿಸುವುದು.
ಹಣ ಪಾವತಿಯು ಯಶಸ್ವಿಯಾದ ನಂತರ ಆನ್‍ಲೈನ್ ಶ್ರಮಯೋಗಿ ಪೆನ್ಷನ್ ಸಂಖ್ಯೆಯನ್ನು ನೀಡಲಾಗುತ್ತದೆ.
ಸ್ವೀಕೃತಿ ಹಾಗೂ ಡೆಬಿಟ್ ಮ್ಯಾಂಡೆಟ್ ಅನ್ನು ಫಲಾನುಭವಿಯ ಸಹಿಗಾಗಿ ಜನರೇಟ್ ಮಾಡಲಾಗುವುದು.
ಸಿಎಸ್‍ಸಿಯು ಸಹಿ ಮಾಡಿರುವ ಫಲಾನುಭವಿಯ ಡೆಬಿಟ್ ಮ್ಯಾಂಡೆಟ್ ಅನ್ನು ಸ್ಕ್ಯಾನ್ ಮಾಡಿ ಅಪ್‍ಲೋಡ್‍ಮಾಡುತ್ತಾರೆ.
ಸಿಎಸ್‍ಸಿಯ ಸಿಬ್ಬಂದಿಗಳು ಶ್ರಮಯೋಗಿ ಕಾರ್ಡ್ ಅನ್ನು ಪ್ರಿಂಟ್ ಮಾಡಿ ಫಲಾನುಭವಿಗೆ ನೀಡುತ್ತಾರೆ.
ಬ್ಯಾಂಕಿನಿಂದ ದೃಢೀಕರಣ ಬಂದ ನಂತರ ಎಸ್‍ಎಸ್‍ಎಂಎಸ್ ಮೂಲಕ ಫಲಾನುಭವಿಗೆ ಮಾಹಿತಿ ನೀಡಲಾಗುತ್ತದೆ.




