ಬೆಂಗಳೂರು: ಲೋಕಸಭಾ ಚುನಾವಣೆ ಅಖಾಡ ಸಜ್ಜುಗೊಂಡಿರುವ ಬೆನ್ನಲ್ಲೇ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಅವರು ಸಿಲುಕಿದ್ದು, ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಪೊಲೀಸ್ ಮಹಾನಿರ್ದೇಶಕ(ಡಿಜಿಪಿ) ಅಲೋಕ್ ಮೋಹನ್ ಅವರು ಈ ಬಗ್ಗೆ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ಅಲ್ಲದೆ ಈ ಬಗ್ಗೆ ಮಹಿಳಾ ಅಧಿಕಾರಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ(ಎಸ್ಐಟಿ)ವನ್ನು ರಚಿಸುವಂತೆ ಸೂಚನೆ ನೀಡಿದ್ದಾರೆ.
ಯಡಿಯೂರಪ್ಪ ಅವರು ಕಳೆದ ಫೆಬ್ರವರಿ ತಿಂಗಳಲ್ಲಿ ನನ್ನ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆ ತಾಯಿ ಕಳೆದ ರಾತ್ರಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ದೂರಿನ ಹಿನ್ನೆಲೆಯಲ್ಲಿ ಸದಾಶಿವನಗರ ಪೊಲೀಸರು ಯಡಿಯೂರಪ್ಪ ವಿರುದ್ಧ ಫೋಕ್ಸೋ ಕಾಯ್ದೆ ಸೆಕ್ಷನ್ 8, ಮತ್ತು ಐಪಿಸಿ ಸೆಕ್ಷನ್ 354(ಎ) ಅಡಿ ಪ್ರಕರಣ ದಾಖಲಿಸಿದ್ದಾರೆ. ಕಳೆದ ರಾತ್ರಿ ಪೊಲೀಸ್ ಠಾಣೆಗೆ ಬಂದ ಮಹಿಳೆ ಟೈಪ್ ಮಾಡಿದ ದೂರಿನ ಪ್ರತಿಯನ್ನು ನೀಡಿದ್ದಾರೆ. ಅದರಲ್ಲಿ, ತಮ್ಮ ಅಪ್ರಾಪ್ತ ಮಗಳ ಮೇಲೆ ಈ ಹಿಂದೆ ಅತ್ಯಾಚಾರ ನಡೆದಿದೆ. ಆ ಪಾಪಿಗಳಿಗೆ ಶಿಕ್ಷೆಯಾಗಿಲ್ಲ. ಈ ವಿಚಾರದಲ್ಲಿ ನಮಗೆ ಅನ್ಯಾಯವಾಗಿದ್ದು, ನ್ಯಾಯ ಒದಗಿಸುವಂತೆ ಯಡಿಯೂರಪ್ಪ ಅವರನ್ನು ಕೋರಲಾಯಿತು.
ಇದಕ್ಕಾಗಿ ನನ್ನ ಅಪ್ರಾಪ್ತ ಮಗಳೊಂದಿಗೆ ಕಳೆದ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಹೋಗಿದ್ದೆ. ಆ ವೇಳೆ ಸುಮಾರು 9 ನಿಮಿಷಗಳ ಕಾಲ ನಮ್ಮೊಂದಿಗೆ ಯಡಿಯೂರಪ್ಪ ಮಾತನಾಡಿದ್ದರು. ಇಬ್ಬರಿಗೂ ಟೀ ಕುಡಿಸಿದ್ದರು. ನಾನು ಯಡಿಯೂರಪ್ಪನವರನ್ನು ಅಪ್ಪಾಜಿ ಎಂದು ಸಂಬೋದಿಸಿದರೆ ನನ್ನ ಮಗಳು ಅವರನ್ನು ತಾತಾ ಎಂದು ಕರೆಯುತ್ತಿದ್ದಳು. ನಮ್ಮ ಅಹವಾಲು ಕೇಳುವ ವೇಳೆ ಯಡಿಯೂರಪ್ಪ ಅವರು ಬಾಲಕಿಯ ಕೈ ಹಿಡಿದುಕೊಂಡೇ ಇದ್ದರು. ಇದಾದ ನಂತರ ಬಾಲಕಿಯನ್ನು ತನ್ನ ರೂಮಿಗೆ ಕರೆದುಕೊಂಡು ಹೋಗಿದ್ದ ಯಡಿಯೂರಪ್ಪ, ಸುಮಾರು 5 ನಿಮಿಷಗಳ ಕಾಲ ಬಾಗಿಲು ಹಾಕಿಕೊಂಡಿದ್ದರು. ಈ ವೇಳೆ ಬಾಲಕಿಯ ಖಾಸಗಿ ಅಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದಾರೆ. ಇದರಿಂದ ಆಘಾತಗೊಂಡ ಬಾಲಕಿ ಅಲ್ಲಿಂದ ತಪ್ಪಿಸಿಕೊಳ್ಳಲು ಯತ್ನಿಸಿದರೂ ಯಡಿಯೂರಪ್ಪ ಹೊರಗೆ ಬಿಡಲಿಲ್ಲ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ಕೆಲ ಸಮಯದ ಬಳಿಕ ಬಾಲಕಿ ರೂಮಿನಿಂದ ಓಡಿಬಂದು ಅಳುತ್ತಾ ಎಲ್ಲಾ ಘಟನೆಯನ್ನು ನನಗೆ ತಿಳಿಸಿದಳು. ನಾನು ಯಡಿಯೂರಪ್ಪ ಅವರನ್ನು ಹೀಗೇಕೆ ಮಾಡಿದಿರಿ? ಎಂದು ಪ್ರಶ್ನಿಸಿದೆ. ಅದಕ್ಕೆ ಅವರು “ರೇಪ್ ಆಗಿದೆಯೋ ಇಲ್ಲವೋ ಎಂದು ಚೆಕ್ ಮಾಡಲು ಹಾಗೆ ಮಾಡಿದೆ” ಎಂದರು. ಇದರಿಂದ ಆಘಾತಗೊಂಡ ನಾನು ಅಳಲಾರಂಭಿಸಿದೆ. ತಕ್ಷಣವೇ ಯಡಿಯೂರಪ್ಪ ಕ್ಷಮೆ ಯಾಚಿಸುತ್ತಾ, “ಈ ವಿಚಾರವನ್ನು ಹೊರಗಡೆ ಎಲ್ಲಿಯೂ ಹೇಳಬಾರದು” ಎಂದು ತಡೆಯಲು ಸಾಕಷ್ಟು ಪ್ರಯತ್ನಿಸಿದರು ಆಗಿರುವ ಅನ್ಯಾಯಕ್ಕೆ ನ್ಯಾಯ ಕೇಳಲು ಹೋದಾಗ ಲೈಂಗಿಕ ಕಿರುಕುಳ ನೀಡಿರುವ ಯಡಿಯೂರಪ್ಪನವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಸಂತ್ರಸ್ತ ತಾಯಿ ದೂರಿನಲ್ಲಿ ಕೋರಿದ್ದಾರೆ.
ಈ ದೂರನ್ನು ಆಧರಿಸಿ ಸದಾಶಿವ ನಗರ ಠಾಣೆ ಪೊಲೀಸರು, ಪೋಕ್ಸೋ ಕಾಯ್ದೆಯಡಿ ಎಫ್ ಐ ಆರ್ ದಾಖಲಿಸಿದ್ದಾರೆ. ಈ ಕಾಯಿದೆಯ ಸೆಕ್ಷನ್ 8ರ ಪ್ರಕಾರ ಆರೋಪ ಸಾಬೀತಾದದಲ್ಲಿ ಕನಿಷ್ಠ ಮೂರು ವರ್ಷ, ಕೆಲವೊಮ್ಮೆ ಐದು ವರ್ಷಗಳವರೆಗೆ ಜೈಲು ಶಿಕ್ಷೆ ಆಗಬಹುದು. ಜೊತೆಗೆ ದಂಡವನ್ನೂ ವಿಧಿಸಬಹುದು.
ಐಪಿಸಿ ಸೆಕ್ಷನ್ 354 (ಎ) ಲೈಂಗಿಕ ಕಿರುಕುಳಕ್ಕೆ ಶಿಕ್ಷೆಯನ್ನು ವಿಧಿಸುತ್ತದೆ. ಇಷ್ಟವಿಲ್ಲದಿದ್ದರೂ ಲೈಂಗಿಕ ಅಭಿವ್ಯಕ್ತಿಯನ್ನು ಮಾಡುವುದು, ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ ಅಥವಾ ವಿನಂತಿಯನ್ನು ಮಾಡುವುದು, ಮಹಿಳೆಯ ಇಚ್ಛೆಗೆ ವಿರುದ್ಧವಾಗಿ ಅಶ್ಲೀಲವಾದದ್ದನ್ನು ತೋರಿಸುವುದು ಶಿಕ್ಷಾರ್ಹ ಅಪರಾಧವೆಂದು ಈ ಸೆಕ್ಷನ್ ಹೇಳುತ್ತದೆ.




