ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಕೋರಿ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ.
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
- ಎನ್ಜಿಟಿಯಲ್ಲಿ ವಕೀಲರನ್ನು ನೇಮಿಸಿ ಹೋರಾಟ ಮಾಡಬೇಕು: ಆರ್.ಅಶೋಕ
ಪ್ರಕರಣ ರದ್ದುಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ, ಆದೇಶ ಕಾಯ್ದಿರಿಸಿತು. ಯಡಿಯೂರಪ್ಪ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಮತ್ತಿತರರ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಸಲ್ಲಿಸಿದ್ದು, ಅದನ್ನು ಸ್ವೀಕರಿಸಲಾಗುವುದಿಲ್ಲ ಎಂದರು.
ದೂರುದಾರ ಮಹಿಳೆ ಪದೇಪದೆ ದೂರು ದಾಖಲಿಸುವುದು ಅವರ ನಡವಳಿಕೆ ತೋರಿಸುತ್ತದೆ. ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು ಮತ್ತಿತರ ಪ್ರಮುಖ ವ್ಯಕ್ತಿಗಳ ವಿರುದ್ಧ ದೂರು ನೀಡುವುದು ಅಭ್ಯಾಸ ಮಾಡಿಕೊಂಡಿದ್ದಾರೆ. ಅಲ್ಲದೇ, ಗಂಡ ಮತ್ತು ಮಗನ ಮೇಲೆಯೂ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.
ಇದಕ್ಕೆ ಸರ್ಕಾರಿ ವಕೀಲರು ಆಕ್ಷೇಪಿಸಿ, ಯಡಿಯೂರಪ್ಪ ವಿರುದ್ದದ ಆರೋಪಕ್ಕೆ ಸಾಕಷ್ಟು ಪುರಾವೆಗಳಿಗೆ. ಹೀಗಾಗಿ ಪ್ರಕರಣ ರದ್ದು ಪಡಿಸಬಾರದು ಎಂದು ವಾದಿಸಿದ್ದರು.




