ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶದ ಮೇರೆಗೆ ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಎಂ ಎನ್ ಕುಮಾರ್ ಅವರನ್ನು ಉಪ್ಪಾರಪೇಟೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ನವರಸ ನಾಯಕ ಜಗ್ಗೇಶ್ ಅವರು ನೀಡಿರುವ 1.25 ಕೋಟಿ ರೂ. ಹಣ ವಂಚನೆ ಪ್ರಕರಣಕ್ಕೆ ಸಂಬಂಧ ಎಂ ಎನ್ ಕುಮಾರ್ ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಲಾಗಿದೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸುದೀಪ್ ನಟನೆಯ ‘ಮಾಣಿಕ್ಯ’ ಪುನೀತ್ ರಾಜ್ ಕುಮಾರ್ ಅಭಿನಯದ ಅಂಜನಿಪುತ್ರ, ಕಿರಿಕ್ ಶಂಕರ, ಮುಕುಂದ ಮುರಾರಿ, ಶಂಕರಗುರು ಸೇರಿದಂತೆ ಹಲವು ಯಶಸ್ವಿ ಚಿತ್ರಗಳನ್ನು ನಿರ್ಮಿಸಿದ್ದ ಎಂ ಎನ್ ಕುಮಾರ್ ಕನ್ನಡ ಚಿತ್ರರಂಗದಲ್ಲಿ ಅತ್ಯಂತ ಪ್ರಭಾವಿ ನಿರ್ಮಾಪಕ ಎಂದು ಗುರುತಿಕೊಂಡಿದ್ದಾರೆ.
ಜಗ್ಗೇಶ್ ಅವರು ಎಂ ಎನ್ ಕುಮಾರ್ ಅವರ ಮೇಲೆ ಯಾವ ಕಾರಣಕ್ಕೆ ದೂರು ನೀಡಿದ್ದರು ಎಂಬುದು ಸ್ಪಷ್ಟವಾಗಿಲ್ಲ. ಸಾಲದ ಹಣವೋ ಅಥವಾ ಸಂಭಾವನೆ ಬಾಕಿ ಮೊತ್ತವೇ ಎಂಬ ಬಗ್ಗೆ ಇನ್ನಷ್ಟು ವಿವರಗಳು ಬಹಿರಂವಾಗಬೇಕಿದೆ.
ಎಂ ಎನ್ ಕುಮಾರ್ ಅವರು ಈ ಹಿಂದೆ ನಟ ಸುದೀಪ್ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಅಡ್ವಾನ್ಸ್ ಪಡೆದಿದ್ದ ಸುದೀಪ್ ಸಿನಿಮಾಕ್ಕೆ ಡೇಟ್ಸ್ ನೀಡಿಲ್ಲ, ಅಡ್ವಾನ್ಸ್ ಹಣವನ್ನೂ ಸಹ ವಾಪಸ್ ಮಾಡಿಲ್ಲ ಎಂದು ಆರೋಪಿಸಿದ್ದರು. ಫಿಲಂ ಚೇಂಬರ್ ಎದುರು ಸುದೀಪ್ ವಿರುದ್ಧ ಪ್ರತಿಭಟನೆ ಸಹ ಮಾಡಿದ್ದರು. ಆ ಬಳಿಕ ನಟ ಸುದೀಪ್ ಅವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದು, ವಿಚಾರಣೆ ನಡೆಯುತ್ತಿದೆ.




