ಬೆಂಗಳೂರು: ಕರ್ನಾಟಕವನ್ನು ಡ್ರಗ್ಸ್ ಮುಕ್ತ ರಾಜ್ಯ ಎಂದು ಘೋಷಿಸಲು ಹಲವಾರು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿರುವ ಗೃಹ ಇಲಾಖೆ ಇದೀಗ ಈ ದಂಧೆ ಕೋರರ ಜೊತೆ ಶಾಮಿಲಾಗಿರುವ ಪೊಲೀಸರಿಗೆ ಬಿಸಿ ಮುಟ್ಟಿಸಲು ಮುಂದಾಗಿದೆ.
- ವರ್ಷದ ಬಳಿಕ ಸೆರೆಮನೆಯಿಂದ ಹೊರಬಂದ ನಟಿ ರನ್ಯಾ ರಾವ್!
- ಪ್ರೊ. ಎಸ್. ಬಿಳಿಗಿರಿ ವಾಸನ್ ಅವರಿಗೆ ಅಭಿನಂದನಾ ಸಮಾರಂಭ
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
ಅದರಲ್ಲೂ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಯಾವ ಪೊಲೀಸರು ಯಾವ ದಂಧೆಕೋರರ ಜೊತೆ ಒಡನಾಟ ಹೊಂದಿದ್ದಾರೆ ಎಂಬ ಕುರಿತು ಗುಪ್ತದಳ ಅಧಿಕಾರಿಗಳಿಂದ ಮಾಹಿತಿ ಪಡೆಯಲು ಮುಂದಾಗಿದೆ.
ಡ್ರಗ್ಸ್ ಸಾಗಾಣಿಕೆ ಮತ್ತು ಮಾರಾಟ ಜಾಲದ ದಂಧೆಕೋರರ ಜೊತೆ ಕೆಳ ಹಂತದ ಪೊಲೀಸ್ ಸಿಬ್ಬಂದಿ ದೊಡ್ಡ ಪ್ರಮಾಣದಲ್ಲಿ ಶಾಮೀಲಾಗಿದ್ದಾರೆ ಎಂಬ ಮಾಹಿತಿ ಗೃಹಸಚಿವ ಪರಮೇಶ್ವರ್ ಅವರನ್ನು ತಲುಪಿದೆ. ಕೆಳಹಂತದ ಸಿಬ್ಬಂದಿ ಶಾಮೀಲಾಗಿರುವ ಹಿನ್ನೆಲೆಯಲ್ಲಿ ಈ ದಂಧೆಕೋರರ ವಿರುದ್ಧ ಸಮರ ಸಾರಲು ಕಷ್ಟವಾಗಿದೆ ಎಂದು ಕೆಲವು ಅಧಿಕಾರಿಗಳು ಗೃಹ ಮಂತ್ರಿಗಳ ಗಮನಸೆಳೆದಿದ್ದಾರೆ.
ಇದನ್ನು ಪರಮೇಶ್ವರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಸಿದ್ದಾರೆ ಎಂದು ಹೇಳಲಾಗಿದೆ. ನಿನ್ನೆ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬಂದಿದ್ದು, ಇದೀಗ ಇಂತಹ ದಂಧೆಕೋರರ ಜೊತೆ ಶಾಮೀಲಾಗಿರುವ ಪೊಲೀಸರ ವಿರುದ್ಧ ಕಠಿಣ ಕ್ರಮ ಜರುಗಿಸಲು ತೀರ್ಮಾನಿಸಲಾಗಿದೆ.
ಅಂತಹ ವ್ಯಕ್ತಿಗಳನ್ನು ಸೇವೆಯಿಂದ ವಜಾಗೋಳಿಸಲು ಕೂಡ ಸರ್ಕಾರ ಪರಿಶೀಲನೆ ನಡೆಸುತ್ತಿದ್ದು, ಇದಕ್ಕೆ ಮುನ್ನ ಎಲ್ಲ ಠಾಣೆಗಳ ಕುರಿತು ವರದಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಪ್ತದಳಕ್ಕೆ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.
ಪ್ರಮುಖವಾಗಿ ಬೆಂಗಳೂರಿನ ಎಲ್ಲಾ ಠಾಣೆಗಳ ಎಲ್ಲಾ ಸಿಬ್ಬಂದಿಗಳ ಚಲನವಲನಗಳ ಕುರಿತಂತೆ ಪರಿಶೀಲನೆ ನಡೆಸಿ ವರದಿ ನೀಡಲು ಪುಟ್ಟ ದಳಕ್ಕೆ ಸೂಚನೆ ನೀಡಲಾಗಿದೆ ಡ್ರಗ್ಸ್ ದಂಧೆ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿರುವ ಪ್ರದೇಶದ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿಯ ಬಗ್ಗೆ ವಿಶೇಷ ನಿಗಾ ವಹಿಸಲು ಕೂಡ ನಿನ್ನೆ ನಡೆದ ಸಭೆಯಲ್ಲಿ ಸೂಚಿಸಿರುವದಾಗಿ ತಿಳಿದು ಬಂದಿದೆ
ಈ ನಡುವೆ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ ಮೂರು ಕಡೆಗಳಲ್ಲಿ ದಾಳಿ ನಡೆಸಿ ಡ್ರಗ್ಸ್ ತಯಾರಿಸುವ ಕಾರ್ಖಾನೆ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯಲೋಪ ಆರೋಪದಡಿ ಮೂವರು ಇನ್ಸ್ಪೆಕ್ಟರ್ಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಆವಲಹಳ್ಳಿ ಠಾಣೆ ಇನ್ಸ್ಪೆಕ್ಟರ್ ರಾಮಕೃಷ್ಣ ರೆಡ್ಡಿ, ಕೊತ್ತನೂರು ಠಾಣೆ ಇನ್ಸ್ಪೆಕ್ಟರ್ ಚೇತನ್ ಹಾಗೂ ಬಾಗಲೂರು ಠಾಣೆ ಇನ್ಸ್ಪೆಕ್ಟರ್ ಶಬರೀಶ್ ಅವರನ್ನು ಕರ್ತವ್ಯಲೋಪ ಆರೋಪದ ಮೇಲೆ ಸಸ್ಪೆಂಡ್ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.



