ಸಿದ್ದರಾಮಯ್ಯ ನಿಂದಿಸಿ ಅಮಾನತು ಶಿಕ್ಷೆಗೆ ಗುರಿಯಾದ ಪೊಲೀಸ್

12 months ago

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟ ಪೊಲೀಸ್ ಅಧಿಕಾರಿ ತಲೆದಂಡವಾಗಿದೆ.

ಮೈಸೂರಿನ‌ ಕೇಂದ್ರ ಕಾರಾಗೃಹದಲ್ಲಿ ವೀಕ್ಷಣೆಗಾರನಾಗಿ ಕೆಲಸ ಮಾಡುತ್ತಿರುವ ಎಚ್.ಎನ್.ಮಧು ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಕಾರಾಗೃಹದ ಮುಖ್ಯ ಅಧೀಕ್ಷಕ ಪಿ.ಎಸ್.ರಮೇಶ್ ಆದೇಶಿಸಿದ್ದಾರೆ.

ಬೆಳಗಾವಿಯಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಸಮಾವೇಶದಲ್ಲಿ ಆದ ಗೊಂದಲ ಹಿನ್ನೆಲೆಯಲ್ಲಿ ಪೊಲೀಸ್ ಅಧಿಕಾರಿ ವಿರುದ್ಧ ಆಕ್ರೋಶಗೊಂಡ ಸಿದ್ದರಾಮಯ್ಯ ಕೈ ಎತ್ತಿದ್ದರು. ಈ ಬಗ್ಗೆ ಏ.28 ರಂದು ಎಚ್.ಎನ್.ಮಧು ಕುಮಾರ್ ವಿಡಿಯೊ ಮಾಡಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ತಕ್ಷಣ ಅವರನ್ನು ಅಮಾನತುಗೊಳಿಸಲಾಗಿದೆ. ಜತೆಗೆ ಇಲಾಖಾ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.

Leave a Reply