ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ವಾಣಿಜ್ಯ ಪ್ರದೇಶ ಮತ್ತು ಬಡಾವಣೆಗಳಲ್ಲಿ ನಡೆಯುತ್ತಿದ್ದ ಲೈವ್ ಬ್ಯಾಂಡ್ ಹೆಸರಿನ ಅಶ್ಲೀಲ ನೃತ್ಯ ಪ್ರದರ್ಶನ ಹಾಗೂ ಹೈಟೆಕ್ ವೇಶ್ಯಾವಾಟಿಕೆ ಜಾಲವನ್ನು ಬೆಂಗಳೂರು ಪೊಲೀಸರು ಭೇದಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ನಿಯಮ ಉಲ್ಲಂಘಿಸಿ ಯುವತಿಯರನ್ನು ಬಳಸಿಕೊಂಡು ತಡರಾತ್ರಿಯವರೆಗೂ ಅಶ್ಲೀಲ ನೃತ್ಯ ಪ್ರದರ್ಶನಕ್ಕೆ ಅವಕಾಶ ನೀಡಿದ್ದ 17ಕ್ಕೂ ಹೆಚ್ಚು ಪ್ರತಿಷ್ಠಿತ ಬಾರ್, ಪಬ್, ಕ್ಲಬ್‌ಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದರು.
ನಿಯಮ ಬಾಹಿರ ಚಟುವಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆ ಎಂ.ಜಿ. ರೋಡ್, ಬ್ರಿಗೇಡ್ ರೋಡ್, ಉಪ್ಪಾರಪೇಟೆ ಸುತ್ತಮುತ್ತ ಇರುವ ಕ್ಲಬ್ ಒನ್, ರಂಬಾ, ಬ್ರಿಗೇಡ್ ಬ್ಲೂ ಸೇರಿದಂತೆ 17 ಕ್ಕೂ ಹೆಚ್ಚು ಡ್ಯಾನ್ಸ್ ಬಾರ್‌ಗಳ ಮೇಲೆ ದಾಳಿ ನಡೆಸಿರುವ ಪೊಲೀಸರು ಹಲವು ಅಕ್ರಮ ನಡೆಯುತ್ತಿರುವುದನ್ನು ಪತ್ತೆ ಹಚ್ಚಿ ಪರಿಶೀಲನೆ ಕೈಗೊಂಡಿದ್ದಾರೆ.
ಅವಧಿ ಮೀರಿ ಬಾರ್ ತೆಗೆದಿರುವುದು, ಯುವತಿಯರು ಅಶ್ಲೀಲ ಬಟ್ಟೆ ತೊಟ್ಟು ಡ್ಯಾನ್ಸ್ ಸೇರಿದಂತೆ ಹಲವು ನಿಯಮಗಳ ಉಲ್ಲಂಘನೆಯ ಅಂಶಗಳು ಬೆಳಕಿಗೆ ಬಂದಿವೆ.
ಕೇಂದ್ರ ವಿಭಾಗ ಹಾಗೂ ಪಶ್ಚಿಮ ವಿಭಾಗದ ಡ್ಯಾನ್ಸ್ ಬಾರ್‌ಗಳ ಮೇಲೂ ದಾಳಿ ನಡೆಸಲಾಗಿದ್ದು, ಕಬ್ಬನ್ ಪಾರ್ಕ್, ಅಶೋಕ್ ನಗರ ಸೇರಿದಂತೆ ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದ ಡ್ಯಾನ್ಸ್ ಬಾರ್‌ಗಳ ಮೇಲೆ ಪ್ರಕರಣ ದಾಖಲಾಗಿದೆ.
ಈ ಡ್ಯಾನ್ಸ್ ಬಾರ್‌ಗಳಲ್ಲಿ ಈಶಾನ್ಯ ರಾಜ್ಯಗಳ ಹಲವು ಯುವತಿಯರನ್ನು ಕರೆತಂದು ತಡರಾತ್ರಿಯವರೆಗೂ ಅಶ್ಲೀಲ ಡ್ಯಾನ್ಸ್ ಮಾಡಿಸಲಾಗುತ್ತಿತ್ತು. ಮದ್ಯದ ಹೊಳೆ ಯಥೇಚ್ಛವಾಗಿ ಹರಿಯುತ್ತಿದ್ದು, ಇದು ಕೆಲವು ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೂ ತಿಳಿದಿದ್ದರೂ ಕ್ರಮ ತೆಗೆದುಕೊಂಡಿರಲಿಲ್ಲ ಎಂದು ಗೊತ್ತಾಗಿದೆ. ಕೆಲವೆಡೆ ಗುಪ್ತ ಪ್ರದೇಶಗಳಲ್ಲಿ ಅಶ್ಲೀಲ ನೃತ್ಯದ ಬಳಿಕ ಹೈಟೆಕ್ ವೇಶ್ಯಾವಾಟಿಕೆಗೂ ಅವಕಾಶ ಕಲ್ಪಿಸಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.




