ಬೆಂಗಳೂರು: ಪ್ರಚೋದನಾತ್ಮಕ ಭಾಷಣ, ಚಟುವಟಿಕೆಗಳನ್ನು ಹತ್ತಿಕ್ಕಿ ಕೋಮು ಸೌಹಾರ್ದ ಕಾಪಾಡಲು ಪೊಲೀಸ್ ಅಧಿಕಾರಿಗಳು ಶಕ್ತಿ ಮೀರಿ ಶ್ರಮಿಸಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸೂಚನೆ ನೀಡಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಐಪಿಎಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದ್ವೇಷ ಭಾಷಣ,ಪ್ರಚೋದನಾತ್ಮಕ ಚಟುವಟಿಕೆಗಳನ್ನು ನಡೆಸುವವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಿ ಎಂದರು.
ಕರಾವಳಿ ಭಾಗದಲ್ಲಿ ಸೌಹಾರ್ದತೆ ಕಾಪಾಡಲು ವಿವಿಧ ಧಾರ್ಮಿಕ ಸಂಘಟನೆಗಳ ಮುಖಂಡರೊಂದಿಗೆ ನಿರಂತರವಾಗಿ ಸಭೆ ನಡೆಸಬೇಕು. ದ್ವೇಷ ಭಾಷಣ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು. ಇದೇ ಕಾರಣದಿಂದ ಅಲ್ಲಿನ ಜನ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ. ಮಕ್ಕಳನ್ನು ವಿದ್ಯಾಭ್ಯಾಸಕ್ಕಾಗಿ ಮಂಗಳೂರು ಬಿಟ್ಟು ಬೆಂಗಳೂರು, ಮೈಸೂರಿಗೆ ಕಳುಹಿಸುತ್ತಿದ್ದು ಇದನ್ನು ತಡೆಗಟ್ಟಬೇಕು ಎಂದು ಸೂಚಿಸಿದರು.
ಕೋಮು ಗಲಾಟೆಗಳು ಶಿವಮೊಗ್ಗ ಜಿಲ್ಲೆಯಲ್ಲಿ ಇರಲಿಲ್ಲ. ಈಗ ಆ ಜಿಲ್ಲೆಗೂ ವ್ಯಾಪಿಸಿದೆ. ಇದನ್ನು ಸಂಪೂರ್ಣವಾಗಿ ನಿಯಂತ್ರಿಸದಿದ್ದಲ್ಲಿ ರಾಜ್ಯದಾದ್ಯಂತ ಮುಂದುವರಿಯುತ್ತದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾತ್ಮಕ ಪೋಸ್ಟ್ ಹಾಕುವರ ವಿರುದ್ಧ, ಫೇಕ್ ನ್ಯೂಸ್ ಹರಡುವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು. ಈ ಬಗ್ಗೆ ಆ್ಯಕ್ಷನ್ ಪ್ಲಾನ್ ರೂಪಿಸುವಂತೆ ಸೂಚನೆ ನೀಡಿದರು.
ಆಂಧ್ರಪ್ರದೇಶ, ಗೋವಾ ರಾಜ್ಯಗಳಿಂದ ಮಾದಕ ವಸ್ತುಗಳು ಹೆಚ್ಚಿನ ಪ್ರಮಾಣದಲ್ಲಿ ಸಾಗಣೆಯಾಗುತ್ತಿದೆ. ಯುವಕರ ಕೈಗೆ ಗಾಂಜಾ ಸುಲಭವಾಗಿ ಸಿಗುತ್ತಿದೆ ಎಂಬುದರ ಸಾರ್ವಜನಿಕ ವಲಯದಲ್ಲಿ ತೀವ್ರ ಬೇಸರವಿದೆ. ಇದನ್ನು ಸಂಪೂರ್ಣವಾಗಿ ಮಟ್ಟಹಾಕಲು ಪೊಲೀಸರು ಮತ್ತಷ್ಟು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ನಿರ್ಲಕ್ಷ್ಯ ವಹಿಸಿದರೆ ಯುವಜನತೆಯ ಭವಿಷ್ಯ ಹಾಳಾಗುತ್ತದೆ. ರಾಜ್ಯವನ್ನು ಉಡ್ತಾ ಪಂಜಾಬ್‌ನಂತೆ ಆಗಲು ಬಿಡಬಾರದು ಎಂದು ಸೂಚನೆ ನೀಡಿದರು.




