ಬೆಂಗಳೂರು: ಆಧುನಿಕ ತಂತ್ರಜ್ಞಾನ ಬಳಸಿ ಅಮಾಯಕರನ್ನು ವಂಚಿಸುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ನಡುವೆಯೇ ವಂಚನೆಗಾಗಿಯೇ ಖದೀಮರು ಬಿಪಿಓ ನಡೆಸುತ್ತಿರುವ ಸಂಗತಿಯನ್ನು ಬೆಂಗಳೂರು ಪೊಲೀಸರು ಪತ್ತೆ ಹಚ್ಚಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಅಮೆರಿಕ ಪ್ರಜೆಗಳನ್ನು ಗುರಿಯಾಗಿಸಿಕಿಕೊಂಡು ವಂಚಿಸಲು ಬಿಪಿಓ ಆರಂಭಿಸಿದ ಕದೀಮರು ಆನಂತರದಲ್ಲಿ ಪೊಲೀಸ್ ಅಧಿಕಾರಿ ಸೋಗಿನಲ್ಲಿ ಸಾರ್ವಜನಿಕರಿಗೆ ಕರೆ ಮಾಡಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ ಲಕ್ಷಾಂತರ ರೂ ಹಣ ಪಡೆದು ವಂಚಿಸುತ್ತಿದ್ದರು. ಈ ಸಂಬಂಧ 16 ಮಂದಿ ಆರೋಪಿಗಳನ್ನು ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ.
ಹೆಚ್ಎಸ್ಆರ್ ಲೇಔಟ್ 27ನೇ ಮುಖ್ಯರಸ್ತೆಯಲ್ಲಿ ನಕಲಿ ಬಿಪಿಎಲ್ ಕಂಪನಿ ತೆರೆದು ಮುಗ್ಧ ಜನರಿಗೆ ಕರೆ ಮಾಡಿ ವಂಚಿಸುತ್ತಿರುವ ಬಗ್ಗೆ ಮಾಹಿತಿ ಸಂಗ್ರಹಿಸಿದ ಇನ್ ಸ್ಪೆಕ್ಟರ್ ಹರೀಶ್ ಕುಮಾರ್ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು 16 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ದಾಳಿ ವೇಳೆ 40ಕ್ಕಿಂತ ಹೆಚ್ಚು ಕಂಪ್ಯೂಟರ್ ಸೇರಿದಂತೆ ಇನ್ನಿತರ ಉಪಕರಣಗಳನ್ನು ವಶಕ್ಕೆ ಪಡೆದುಕೊಂಡಿದ್ಧಾರೆ.
ಪ್ರಕರಣದ ತನಿಖೆಯನ್ನ ಆಗ್ನೇಯ ವಿಭಾಗ ಸೈಬರ್ ಕ್ರೈಂ ಠಾಣೆ ಪೊಲೀಸರು ನಡೆಸುತ್ತಿದ್ಧಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಿಬಿಟ್ಸ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ವಂಚಕರು ಕಳೆದ ಎರಡು ವರ್ಷಗಳ ಹಿಂದೆ ಬಿಪಿಓ ಕಂಪನಿ ತೆರೆದಿದ್ದರು. ಕಟ್ಟಡದ ಎರಡು ಮಹಡಿಗಳಲ್ಲಿ ಒಟ್ಟು 20 ರಿಂದ 25 ಮಂದಿ ಉದ್ಯೋಗಿಗಳು ಕೆಲಸ ಮಾಡುತ್ತಿದ್ದರು. ಆನ್ ಲೈನ್ ನಲ್ಲಿ ಕೆಲಸವೆಂದು ಹೇಳಿ ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಂಡು ಸಾರ್ವಜನಿಕರಿಗೆ ಹೇಗೆ ವಂಚಿಸಬೇಕೆಂದು ತರಬೇತಿ ನೀಡುತ್ತಿದ್ದರು.
ಬಳಿಕ ಯುಎಸ್ಎ ಸೇರಿದಂತೆ ವಿವಿಧ ದೇಶಗಳ ಪ್ರಜೆಗಳಿಗೆ ರಾತ್ರಿ ವೇಳೆ ಪೊಲೀಸರು ಸೇರಿದಂತೆ ವಿವಿಧ ತನಿಖಾ ಏಜೆನ್ಸಿಗಳ ಸೋಗಿನಲ್ಲಿ ಕರೆ ಮಾಡಿ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವುದಾಗಿ ಬೆದರಿಸಿ ಸಹಾಯ ಮಾಡುವುದಾಗಿ ನಂಬಿಸಿ ವಂಚಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.



