ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದಕ್ಷ ನಾಯಕತ್ವದಲ್ಲಿ ದೇಶ ಪ್ರಗತಿಪಥದಲ್ಲಿ ಮುನ್ನಡೆಯುತ್ತಿದೆ. ಪ್ರಧಾನಿ ಅವರ ಜನಪ್ರಿಯತೆ ಉತ್ತುಂಗದಲ್ಲಿದ್ದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಅಭ್ಯರ್ಥಿಗಳು ಜಯಭೇರಿ ಬಾರಿಸಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದರು.
- ಭಾರತದ 72% IAS ಅಧಿಕಾರಿಗಳು, 90% ಹೈಕೋರ್ಟ್ ನ್ಯಾಯಮೂರ್ತಿಗಳು ಬ್ರಾಹ್ಮಣರೇ?
- ಪ್ರವಾಸಿ ಮಾರ್ಗದರ್ಶಿ ತರಬೇತಿಗೆ ಅರ್ಜಿ ಆಹ್ವಾನ
- ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರಿಂದ ‘ಫ್ರೀಡಂ ಹಬ್ಬ’ ಘೋಷಣೆ
- ರಾಜೀನಾಮೆ ಸಲ್ಲಿಸುವ ಮೂಲಕ ಅಸಮಾಧಾನ ವ್ಯಕ್ತಪಡಿಸಿದ ಬಿ.ಆರ್.ಪಾಟೀಲ್
- ಫೆಲೋಶಿಪ್ಗೆ ಅರ್ಜಿ ಆಹ್ವಾನ
ಬಿಜೆಪಿ ಲೋಕಸಭಾ ಚುನಾವಣಾ 2024ರ ಮಾಧ್ಯಮ ಕೇಂದ್ರದ ಉದ್ಘಾಟನೆ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದು 10 ವರ್ಷಗಳು ಕಳೆದರೂ ನರೇಂದ್ರ ಮೋದಿ ಅವರ ಜನಪ್ರಿಯತೆ ಇನ್ನೂ ಉತ್ತುಂಗಕ್ಕೆ ಏರಿದೆ. ಮೋದಿ ಜನಪ್ರಿಯತೆ ಮುಂದೆ ಈ ಬಾರಿ ಯಾವ ರಾಜಕೀಯ ಪಕ್ಷಗಳ ಆಟಗಳು ನಡೆಯುವುದಿಲ್ಲ ಎಂದರು.
ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಆಡಳಿತದಿಂದ ಜನ ರೋಸಿ ಹೋಗಿದ್ದಾರೆ. ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲಾರದ ಈ ಸರ್ಕಾರದ ಧೋರಣೆ ಬಗ್ಗೆ ಹಿಡಿ ಶಾಪ ಹಾಕುತ್ತಿದ್ದು, ಲೋಕಸಭೆ ಚುನಾವಣೆಯಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್ಸಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದರು.
ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಪರಿವರ್ತಿಸುವ ಸಂಕಲ್ಪದೊಂದಿಗೆ ಕೇಂದ್ರದ ಮೋದಿಯವರ ನೇತೃತ್ವದ ಸರಕಾರ ಜನಪರ ಯೋಜನೆಗಳನ್ನು ನೀಡಿದೆ. ಹಾಗಾಗಿ ಮೋದಿ ಮತ್ತೊಮ್ಮೆ ಎಂಬ ಘೋಷಣೆ ದೇಶಾದ್ಯಂತ ಕೇಳಿಸುತ್ತಿದೆ ಎಂದರು.
ಕರ್ನಾಟಕ ದಕ್ಷಿಣ ಭಾರತದ ಬಿಜೆಪಿಯ ಹೆಬ್ಬಾಗಿಲು ಎಂಬುದನ್ನು ನಾವು ಮತ್ತೆ ಸಾಬೀತು ಮಾಡಬೇಕಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ನಿಷ್ಕ್ರಿಯವಾಗಿದೆ. ಅದು ಬರಗಾಲ ನಿರ್ವಹಣೆಯಲ್ಲಿ ಸಂಪೂರ್ಣ ವಿಫಲವಾಗಿದೆ. 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡರೂ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳು ಎಚ್ಚತ್ತುಕೊಳ್ಳದೆ ಇರುವುದು ನಿಜಕ್ಕೂ ದುರಂತವೇ ಸರಿ ಎಂದರು.



