ಬೆಂಗಳೂರು: ಕನ್ನಡ ಜನಶಕ್ತಿ ಕೇಂದ್ರ ಮತ್ತು ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನದ ಜಂಟಿ ಆಶ್ರಯದಲ್ಲಿ ಜೂನ್ 9ರಂದು ಸಮಾಜವಾದಿ ಧುರೀಣ ಶಾಂತವೇರಿ ಗೋಪಾಲಗೌಡರ ಸಂಸ್ಮರಣೆ ಹಾಗೂ ‘ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ’ ಕೃತಿ ಲೋಕಾರ್ಪಣೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಶೂದ್ರ ಶ್ರೀನಿವಾಸ್ ಅವರು ಈ ಮಹತ್ವದ ಕೃತಿಯನ್ನು ರಚಿಸಿದ್ದಾರೆ.
- ಕಾವೇರಿ ವಿಚಾರವಾಗಿ ವಿಪಕ್ಷಗಳ ನಾಯಕ ವಿಶ್ವಾಸದ ಬಳಿಕ ಮುಂದಿನ ತೀರ್ಮಾನ: ಡಿ.ಕೆ.ಶಿವಕುಮಾರ್
- ಸಂಸದೀಯ ಪ್ರಜಾಪ್ರಭುತ್ವ ಉಳಿಯಬೇಕಾದರೆ ಕಾಯ್ದೆ ಕಾನೂನುಗಳು ಚರ್ಚಿತವಾಗಬೇಕು: ಡಾ.ಎಚ್.ಸಿ.ಮಹದೇವಪ್ಪ
- ನೀಟ್ NEET ಹೋರಾಟದ ನಡುವೆ ವೈರಲ್ ಆದ ರಾಹುಲ್ ಗಾಂಧಿ, ದೀಪ್ಕೆ, ಗ್ರೆಟಾ, ಸೊರೊಸ್ ಫೋಟೋ!
- ಸಾವಯವ ರೈತರನ್ನು ಬೆಂಬಲಿಸಲು ಸಾವಯವ ಸಂತೆಯಲ್ಲಿ ಪಾಲ್ಗೊಳ್ಳಿ: ದರ್ಶನ್ ಪುಟ್ಟಣ್ಣಯ್ಯ
- ಕನಿಷ್ಠ ವೇತನ ಕೂಡಲೇ ಜಾರಿಗೊಳಿಸದಿದ್ದರೆ ತೀವ್ರ ಪ್ರತಿರೋಧ: ಜೆ ಬಾಲಕೃಷ್ಣ ಶೆಟ್ಟಿ
ಗಣ್ಯರ ಉಪಸ್ಥಿತಿ: ಬೆಂಗಳೂರಿನ ಬಸವನಗುಡಿಯಲ್ಲಿರುವ ನ್ಯಾಷನಲ್ ಕಾಲೇಜಿನ ‘ಎಚ್.ಎನ್.ಮಲ್ಟಿ ಮೀಡಿಯಾ ಸಭಾಂಗಣ’ದಲ್ಲಿ ಜೂನ್ 9ರ ಮಂಗಳವಾರ ಸಂಜೆ 5 ಗಂಟೆಗೆ ಕಾರ್ಯಕ್ರಮ ಜರುಗಲಿದೆ. ಶಾಸಕ ಬಿ.ಆರ್. ಪಾಟೀಲ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಮಾಜಿ ಸಚಿವ ಕೆ.ಆರ್. ರಮೇಶ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಖ್ಯಾತ ನಾಟಕಕಾರಟಿ.ಎನ್.ಸೀತಾರಾಮ್ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಬಂಜಗೆರೆ ಜಯಪ್ರಕಾಶ್ ಅವರು ಭಾಗವಹಿಸಲಿದ್ದಾರೆ.
ಇದೇ ಸಂದರ್ಭದಲ್ಲಿ ಕೃತಿಯ ಲೇಖಕರಾದ ಶೂದ್ರ ಶ್ರೀನಿವಾಸ್ ಹಾಗೂ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಪ್ರತಿಷ್ಠಾನದ ಕಾರ್ಯದರ್ಶಿ ರಾಮ ಮನೋಹರ್ ಅವರು ಉಪಸ್ಥಿತರಿರಲಿದ್ದಾರೆ. ಕನ್ನಡ ಜನಶಕ್ತಿ ಕೇಂದ್ರದ ಅಧ್ಯಕ್ಷರಾದ ಸಿ.ಕೆ.ರಾಮೇಗೌಡ ಅವರು ಪ್ರಾಸ್ತಾವಿಕ ನುಡಿಗಳನ್ನಾಡಲಿದ್ದಾರೆ.

ಕಾರ್ಯಕ್ರಮದ ಮುಕ್ತಾಯದ ನಂತರ ಸಂಜೆ 6:30ಕ್ಕೆ ಉಪಾಹಾರದ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಮಾಜವಾದಿ ಚಿಂತನೆ ಹಾಗೂ ಸಾಹಿತ್ಯಾಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕಾಗಿ ಸಂಘಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
ಕಾರ್ಯಕ್ರಮದ ವಿವರಗಳು:
• ದಿನಾಂಕ: ಜೂನ್ 9, ಮಂಗಳವಾರ
• ಸಮಯ: ಸಂಜೆ 5:00 ಗಂಟೆಗೆ (ಉಪಾಹಾರ ಸಂಜೆ 6:30ಕ್ಕೆ)
• ಸ್ಥಳ: ಎಚ್.ಎನ್.ಮಲ್ಟಿ ಮೀಡಿಯಾ ಸಭಾಂಗಣ, ನ್ಯಾಷನಲ್ ಕಾಲೇಜ್, ಬಸವನಗುಡಿ, ಬೆಂಗಳೂರು – 560004




