ಬೆಂಗಳೂರು: ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಲೋಕಾಯುಕ್ತ ತನಿಖೆಗೆ ಕೋರ್ಟ್ ಆದೇಶಿಸಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡುವ ಅಗತ್ಯವಿಲ್ಲ ತೀರ್ಪಿನ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
- ರಾಜ್ಯದ ಅಭಿವೃದ್ಧಿಗೆ ಆರ್.ಅಶೋಕ್ ಅಡ್ಡಗಾಲು: ಕೆಪಿಸಿಸಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋರ್ಟ್ ತೀರ್ಪಿನ ಬಳಿಕ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು ಎಂಬ ಮಾತು ಕೇಳಿ ಬರುತ್ತಿದೆ, ಇದು ಸರಿಯಲ್ಲ. ರಾಜೀನಾಮೆ ಕೊಡಬೇಡಿ ಎಂದು ಸಿಎಂಗಳಿಗೆ ನಾವೆಲ್ಲಾ ಹೇಳಿದ್ದೇವೆ. ಹೈಕಮಾಂಡ್ ಸಹ ಸಿಎಂಗಳ ಬೆನ್ನಿಗಿದೆ ಎಂದರು.
ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರ ಪಾತ್ರ ಏನೂ ಇಲ್ಲ. ಅವರಿಂದ ಅಧಿಕಾರ ದುರುಪಯೋಗವೂ ಆಗಿಲ್ಲ ಎಂದು ಸ್ಪಷ್ಟಪಡಿಸಿದರು.
ಕೋರ್ಟ್ನಲ್ಲಿ ನಮಗೆ ನ್ಯಾಯ ಸಿಕ್ಕಿಲ್ಲ. ಮುಂದೆ ಕಾನೂನು ಹೋರಾಟ ಮಾಡುತ್ತೇವೆ. ವಿಭಾಗೀಯ ಪೀಠದಲ್ಲಿ ಈ ತೀರ್ಪನ್ನು ಪ್ರಶ್ನಿಸುತ್ತೇವೆ. ಅಗತ್ಯ ಬಿದ್ದರೆ ಸುಪ್ರೀಂ ಕೋರ್ಟ್ಗೂ ಅರ್ಜಿ ಸಲ್ಲಿಸುತ್ತೇವೆ. ಸಿಎಂ ಸಿದ್ದರಾಮಯ್ಯನವರ ವಿರುದ್ಧ ರಾಜಕೀಯ ಪ್ರೇರಿತವಾಗಿ ಷಡ್ಯಂತ್ರ ಮಾಡಲಾಗಿದೆ. ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದರು.




