ಬೆಂಗಳೂರು: ಕೋಟ್ಯಂತರ ಭಾರತೀಯರ ಹೋರಾಟ, ತ್ಯಾಗ ಬಲಿದಾನದಿಂದ ಭಾರತ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಅರಣ್ಯ ಅಭಿವೃದ್ಧಿ ನಿಮಗದ ನಿರ್ದೇಶಕಿ ಭಾಗ್ಯವತಿ ಅಮರೇಶ್ ಹೇಳಿದರು.
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಹೊಂಬೇಗೌಡನಗರ ವಾರ್ಡ್ ಬಿ.ಜೆ.ಪಿ ವತಿಯಿಂದ ಆಜಾದಿ ಕಾ ಅಮೃತ್ ಮಹೋತ್ಸವ ಸಂದರ್ಭದಲ್ಲಿ ಹರ್ ಘರ್ ತಿರಂಗಾ ಆಂದೋಲನದ ಅಂಗವಾಗಿ 2000 ಪಾಲಿಸ್ಟರ್ ತ್ರಿವರ್ಣ ಧ್ವಜ ವಿತರಣಾ ಕಾರ್ಯಕ್ರಮದಲ್ಲಿ ಮಾತಾಡಿ ಅವರು, ಸ್ವಾತಂತ್ಯ್ರ ಸಿಕ್ಕಿ ನಮಗೆ 75 ವರ್ಷವಾಗಿದೆ. ಈ ಶುಭ ಸಂದರ್ಭದಲ್ಲಿ ವಿಶ್ವದ ಬಲಿಷ್ಠ ಪ್ರಧಾನಿ ನರೇಂದ್ರ ಮೋದಿರವರು ದೇಶದ ಜನತೆಗೆ ಆಜಾದಿ ಅಮೃತ್ ಮಹೋತ್ಸವ ಅಂಗವಾಗಿ ಆಗಸ್ಟ್ 11ರಿಂದ 15ರವರೆಗೆ ಐದು ದಿನಗಳ ಕಾಲ ಹರ್ ಘರ್ ತಿರಂಗಾ ಆಂದೋಲನದಲ್ಲಿ ಪ್ರತಿ ಮನೆಯಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಬೇಕು ಕರೆ ನೀಡಲಾಗಿದೆ ಎಂದರು.
ಹರ್ ಘರ್ ತಿರಂಗಾ ಆಂದೋಲನ ಅಂಗವಾಗಿ ಹೊಂಬೇಗೌಡನಗರ ವಾರ್ಡ್ ನಲ್ಲಿ 2000 ತ್ರಿವರ್ಣ ಧ್ವಜವನ್ನು ಪ್ರತಿ ಮನೆಗಳಿಗೆ ಉಚಿತವಾಗಿ ತಲುಪಿಸಲಾಗುತ್ತದೆ. ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣ, ಬಲಿದಾನ ನೀಡಿದ ಮಹನೀಯರ ಮಹತ್ವ ಸಂದೇಶಗಳನ್ನು ಪ್ರತಿ ಮನೆಗಳಿಗೆ ತಲುಪಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ಪ್ರಪ್ರಥಮ ಬಾರಿಗೆ ಹರ್ ಘರ್ ತಿರಂಗಾ ಬಹುಡೊಡ್ಡ ಆಂದೋಲನವಾಗಿ ಮಾಡಲಾಗುತ್ತಿದೆ ಎಂದರು.




