ಬೆಂಗಳೂರು: ಅಧಿಕಾರಿಗಳ ವರ್ಗಾವಣೆ, ಅಭಿವೃದ್ಧಿ ಯೋಜನೆಗಳಿಗೆ ಅನುದಾನ ವಿತರಣೆಯಲ್ಲಿ ತಾರತಮ್ಯ ಮಾಡಲಾಗುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಶಾಸಕರು ನಾಳೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ವಿಷಯ ಪ್ರಸ್ತಾಪಿಸಲು ತೀರ್ಮಾನಿಸಿದ್ದಾರೆ.
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
- ದಶಕ ಮೀರಿದ ಕಾನೂನು ಹಾದಿ ಮತ್ತು ಉತ್ತರವಿಲ್ಲದ ಪ್ರಶ್ನೆಗಳು
- ಪರಿಸರವನ್ನೂ ಉಳಿಸಬೇಕು, ಮಲೆನಾಡಿನ ರೈತರ ಬದುಕನ್ನೂ ಉಳಿಸಬೇಕು: ಮಧು ಬಂಗಾರಪ್ಪ
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
ಕಳೆದ ರಾತ್ರಿ ಔತಣಕೂಟ ಹೆಸರಲ್ಲಿ ಸೇರಿದ 40 ಕ್ಕೂ ಶಾಸಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದೂವರೆ ವರ್ಷಗಳಾಗುತ್ತಾ ಬರುತ್ತಿದೆ. ತಮ್ಮ ಕ್ಷೇತ್ರದ ವ್ಯಾಪ್ತಿಯಲ್ಲಿ ಯಾವುದೇ ಅಭಿವೃದ್ಧಿ ಯೋಜನೆ ಕೈಗೊಂಡಿಲ್ಲ. ಎಲ್ಲದಕ್ಕೂ ಗ್ಯಾರಂಟಿಗಳತ್ತ ಬೆರಳು ತೋರಿಸುವ ಮೂಲಕ ಅನುದಾನ ನೀಡುತ್ತಿಲ್ಲ ಎಂದು ಅಲವತ್ತುಕೊಂಡಿರುವುದಾಗಿ ವರದಿಯಾಗಿದೆ.
ವರ್ಗಾವಣೆ ವಿಚಾರಗಳಿಂದಲೂ ನಮಗೆ ಲಾಭ ಇಲ್ಲ. ನಮಗೆ ಹೆಚ್ಚಿನ ಅನುದಾನ ಕೂಡ ಸಿಗುತ್ತಿಲ್ಲ. ಹೀಗೆಯೇ ಆದರೆ ಶಾಸಕರಾಗಿ ನಮಗೆ ಏನು ಪ್ರಯೋಜನ ಎಂದು ಕೆಲವರು ಅಸಮಾಧಾನ ತೋಡಿಕೊಂಡಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಅಲ್ಲದೆ, ಪಿಡಿಒ ವರ್ಗಾವಣೆಯನ್ನು ಕೌನ್ಸಿಲಿಂಗ್ ಮೂಲಕ ಮಾಡುವ ತೀರ್ಮಾನವನ್ನು ಸರ್ಕಾರ ತೆಗೆದುಕೊಂಡಿದೆ. ಇದರ ಜೊತೆ ಸಬ್ ರಿಜಿಸ್ಟ್ರಾರ್ ವರ್ಗಾವಣೆ ಕೂಡ ಕೌನ್ಸಿಲಿಂಗ್ ಮೂಲಕ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ. ಇನ್ಸ್‌ಪೆಕ್ಟರ್ ವರ್ಗಾವಣೆ ಎರಡು ವರ್ಷಕ್ಕೊಮ್ಮೆ ಮಾಡಲಾಗಿದೆ. ಹೀಗಾಗಿ ವರ್ಗಾವಣೆ ವಿಚಾರದಿಂದಲೂ ನಮ್ಮನ್ನು ದೂರ ಇಡಲಾಗಿದೆ ಎಂದು ಶಾಸಕರು ಅಳಲು ತೋಡಿಕೊಂಡಿದ್ದಾರೆ ಎನ್ನಲಾಗಿದೆ.
ಇತ್ತ ಸರ್ಕಾರದಿಂದ ಸಮರ್ಪಕವಾದ ಅನುದಾನ ಕೂಡ ಸಿಗುತ್ತಾ ಇಲ್ಲ. ಹೊಸದಾಗಿ ಆಯ್ಕೆಯಾದ ಶಾಸಕರು ನಾವು. ನಮ್ಮ ಕಷ್ಟ ಕೇಳುವವರು ಯಾರು ಎಂದು ಅವರು ಅಲವತ್ತುಕೊಂಡಿದ್ದು ನಾಳೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಲು ಸಿದ್ಧತೆ ನಡೆದಿದೆ.



