ಬೆಂಗಳೂರು: ಬೆಳಗಾವಿ ಜಿಲ್ಲೆಯ ಭೂತರಾಮನ ಹಟ್ಟಿ ಪ್ರಾಣಿ ಸಂಗ್ರಹಾಲಯದ ಆಸುಪಾಸಿನ ಗ್ರಾಮಗಳಲ್ಲಿ ಪ್ರಾಣಿಗಳಿಗೆ ಕೂರೊನಾ ಮಾದರಿಯ ಹಿಮೋ ರೆಜಿಕ್ ಸೆಪ್ಟೀಸೀಮಿಯ(ಗಳಲೆ ರೋಗ) ಸೋಂಕು ಹರಡುವ ಸಾಧ್ಯತೆಯಿದ್ದು, ವ್ಯಾಪಕ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಕೆ ನೀಡಲಾಗಿದೆ.
- ಪ್ರೊ. ಬರಗೂರು ಅವರ ದಿಟ್ಟ ಹೆಜ್ಜೆ – 25 ವರ್ಷಗಳ ಸಾರ್ಥಕ ಯಾನ!
- ಸಂಪುಟದಿಂದ ಹೊರಗಿಟ್ಟಿರುವುದು ನನಗೆ ಸಿಕ್ಕ ಪ್ರತಿಫಲವೇ?: ಬಿ ಆರ್ ಪಾಟೀಲ್
- ಸಂಪುಟದಲ್ಲಿ ಭ್ರಷ್ಟಾಚಾರಿಗಳು, ಪೇಮೆಂಟ್ ಕೋಟಾ ಮೂಲಕ ಅವಕಾಶ ಗಿಟ್ಟಿಸಿಕೊಂಡವರು ಇದ್ದಾರೆ: ಆರ್.ಅಶೋಕ
- ಬಿಜೆಪಿ ನಾಯಕರು ಸಂವಿಧಾನ ಓದಿದನ ನಂತರ ಕಾಂಗ್ರೆಸ್ ಲೆಟರ್ಹೆಡ್ ಓದಲಿ: ಬಿ.ಕೆ.ಹರಿಪ್ರಸಾದ್
- ನೀರು ಸತ್ಯಾಗ್ರಹ ಕೃತಕ ಬುದ್ಧಿಮತ್ತೆ ಮತ್ತು ಕೃಷಿ ಕುರಿತು ಗಂಭೀರ ಚರ್ಚೆ
ಬೆಂಗಳೂರಿನ ರಾಷ್ಟ್ರೀಯ ಪಶು ವೈದ್ಯಕೀಯ ಸಾಂಕ್ರಾಮಿಕ ರೋಗಶಾಸ್ತ್ರ ಮತ್ತು ರೋಗ ಮಾಹಿತಿ ಸಂಸ್ಥೆ (N i r e p r i d) ಸಂಸ್ಥೆ ಎಚ್ಚರಿಕೆ ಸಂದೇಶ ರವಾನಿಸಿದ್ದು, ಪ್ರಾಣಿಗಳ ಬಗ್ಗೆ ವಿಶೇಷ ನಿಗಾವಹಿಸಬೇಕು. ಸ್ವಲ್ಪ ಪ್ರಮಾಣದ ಬಳಲಿಕೆ ಅಥವಾ ಜ್ವರ ಕಾಣಿಸಿಕೊಂಡರೆ ಕೂಡಲೇ ಪಶು ವೈದ್ಯರನ್ನು ಸಂಪರ್ಕಿಸಬೇಕು ಎಂದು ಸೂಚಿಸಲಾಗಿದೆ.
ಬೆಳಗಾವಿಯ ಭೂತರಾಮನ ಹಟ್ಟಿ ಪ್ರಾಣಿ ಸಂಗ್ರಹಾಲಯದಲ್ಲಿನ ಪ್ರಾಣಿಗಳಿಗೆ ಈ ರೀತಿಯ ಸೋಂಕು ತಗುಲಬಹುದು ಎಂದು ಮೃಗಾಲಯದ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳಿಗೂ ಕೂಡಾ ಮಾಹಿತಿ ರವಾನಿಸಿ ಮುಂಜಾಗ್ರತ ಕ್ರಮ ಕೈಗೊಳ್ಳಲು ಸೂಚಿಸಲಾಗಿತ್ತು ಎಂದು ಗೊತ್ತಾಗಿದೆ.
ಸಾಂಕ್ರಾಮಿಕ ರೋಗ ನಿಯಂತ್ರಣ ಸಂಸ್ಥೆ ನೀಡಿದ ವರದಿಯ ಬಗ್ಗೆ ಅರಣ್ಯ ಮತ್ತು ಮೃಗಾಲಯದ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಅರಣ್ಯ ಸಚಿವ ಈಶ್ವರ ಖಂಡ್ರೆ, ಮೃಗಾಲಯದಲ್ಲಿನ ಕೃಷ್ಣ ಮೃಗಗಳ ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಈ ದುರಂತದಲ್ಲಿ ಮೃಗಾಲಯದಲ್ಲಿದ್ದ 38 ಕೃಷ್ಣಮೃಗಗಳ ಪೈಕಿ 31 ಕೃಷ್ಣಮೃಗಗಳು ಮೃತಪಟ್ಟಿವೆ. ಕೇವಲ ಏಳು ಕೃಷ್ಣಮೃಗಗಳು ಮಾತ್ರ ಬದುಕುಳಿದಿದ್ದು, ಅವುಗಳಿಗೆ ಎಲ್ಲ ರೀತಿಯ ಚಿಕಿತ್ಸೆ ನೀಡಲಾಗುತ್ತಿದೆ. ಪಶು ವೈದ್ಯರು ಮತ್ತು ಮೃಗಾಲಯದ ಸಿಬ್ಬಂದಿ ಇವುಗಳ ಮೇಲೆ ನಿಗಾ ವಹಿಸಿದ್ದಾರೆ ಎಂದರು.
ಈ ಸೋಂಕು ಮೃಗಾಲಯದ ಇತರೆ ಪ್ರಾಣಿಗಳಿಗೆ ಹರಡುವ ಸಾಧ್ಯತೆ ಇದೆ ಎಂಬ ವರದಿಗಳ ಹಿನ್ನೆಲೆಯಲ್ಲಿ ಇಡೀ ಮೃಗಾಲಯಕ್ಕೆ ಬ್ಯಾಕ್ಟೀರಿಯಾ ನಿರೋಧಕ ಕ್ರಿಮಿನಾಶಕವನ್ನು ಸಿಂಪಡಿಸಲಾಗಿದ್ದು, ವೈರಸ್ ಹರಡದಂತೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ಮೃಗಾಲಯದ ಸುತ್ತಮುತ್ತಲಿನ ಗ್ರಾಮಗಳಲ್ಲೂ ಸೋಂಕು ಹರಡುವ ಸಾಧ್ಯತೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಪಶುಸಂಗೋಪನ ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದರು.




