ಬೆಂಗಳೂರು: ಬೆಂಗಳೂರು ಕೇಂದ್ರ ಲೋಕಸಭಾ ಚುನಾವಣೆಯಲ್ಲಿ ಲಕ್ಷಾಂತರ ಮತಗಳು ಕಳ್ಳತನವಾಗಿರುವ ಕುರಿತು ಕೇಂದ್ರ ಬಿಜೆಪಿ ಸರ್ಕಾರ ಮತ್ತು ಚುನಾವಣೆ ಆಯೋಗದ ವಿರುದ್ದ ರಾಜ್ಯ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥಗೌಡ ನೇತೃತ್ವದಲ್ಲಿ ಮೆಜೆಸ್ಟಿಕ್ ನಲ್ಲಿ ಪೋಸ್ಟರ್ ಅಂಟಿಸಿಸುವ ಮೂಲಕ ಜನಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಯುವ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಇದೇ ಸಂದರ್ಭದಲ್ಲಿ ಮಾತನಾಡಿದ ಹೆಚ್.ಎಸ್.ಮಂಜುನಾಥಗೌಡ, ಸಂಸದ ರಾಹುಲ್ ಗಾಂಧಿ ಅವರು ಬಿಜೆಪಿ ಪಕ್ಷ ಮತ್ತು ಚುನಾವಣೆ ಆಯೋಗ ಲೋಕಸಭಾ ಚುನಾವಣೆಯಲ್ಲಿ ಶಾಮೀಲಾಗಿ ಅಂದಾಜು 70ಕ್ಕೂ ಹೆಚ್ಚು ಲೋಕಸಭಾ ಕ್ಷೇತ್ರಗಳಲ್ಲಿ ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ ಎಂದು ಸಂಪೂರ್ಣ ಸಾಕ್ಷ್ಮಿ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ ಎಂದರು.
70ಕ್ಕಿಂತ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ 30 ಸಾವಿರ ಕಡಿಮೆ ಅಂತರದಲ್ಲಿ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸಿದೆ. ಇದರ ಹಿಂದಿನ ಷಡ್ಯಂತ್ರವನ್ನು ರಾಹುಲ್ ಗಾಂಧಿರವರು ಬಹಿರಂಗ ಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ನ್ಯಾಯಯುತ ಚುನಾವಣೆಯಾಗಲು ಚುನಾವಣೆ ಆಯೋಗ ಜವಾಬ್ದಾರಿ. ಆದರೆ ಬಿಜೆಪಿ ಪಕ್ಷದ ಜೊತೆಯಲ್ಲಿ ಸೇರಿ ಚುನಾವಣೆಯನ್ನ ಬುಡಮೇಲು ಮಾಡುತ್ತಿದ್ದಾರೆ. ವಾಮಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಕೇಂದ್ರ ಸರ್ಕಾರ ಸರ್ಕಾರ ನಡೆಸಲು ಅಧಿಕಾರವಿಲ್ಲ ಎಂದರು.
ಮತಗಳ್ಳತನ ಮಾಡಿ ಅಧಿಕಾರಕ್ಕೆ ಬಂದಿರುವ ಕೇಂದ್ರ ಸರ್ಕಾರ ಯಾವುದೇ ನೈತಿಕ ಹಕ್ಕಿಲ್ಲ. ಮತಗಳ್ಳತನ ಮಾಡಿರುವ ಬಿಜೆಪಿ ಕೇಂದ್ರ ಸರ್ಕಾರ ಮತ್ತು ಚುನಾವಣೆ ಆಯೋಗದ ವಿರುದ್ದ ಜನಜಾಗೃತಿ ಮೂಡಿಸಲು ಯುವ ಕಾಂಗ್ರೆಸ್ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ಮತ್ತು ಜನಜಾಗೃತಿ ಮೂಡಿಸಲಾಗುತ್ತಿದೆ ಎಂದರು.








