ಶಿವಮೊಗ್ಗ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ಸಮುದಾಯದ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ, ಹಾಗೂ ವಿದ್ಯಾಸಿರಿ (ಊಟ ಮತ್ತು ವಸತಿ ಸಹಾಯ ಯೋಜನೆ) ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ವಿದ್ಯಾರ್ಥಿಗಳ ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿ ಮೇರೆಗೆ ಅವಧಿಯನ್ನು ಅಕ್ಟೋಬರ್ 15ರ ವರಗೆ ವಿಸ್ತರಿಸಲಾಗಿದ್ದು, ಅರ್ಜಿಯನ್ನು www.ssp.postmartic.karnataka.gov.in ವೆಬ್ಸೈಟ್ ಮೂಲಕ ಅರ್ಜಿ ಸಲ್ಲಿಸುವಂತೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಹೆಚ್ಚಿನ ಮಾಹಿತಿ ಹಾಗೂ ಕಾರ್ಯಕ್ರಮಗಳ ವಿವರ ಅರ್ಹತೆ ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ www.bcwd.karnataka.gov.in ವೆಬ್ಸೈಟ್, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್ postmartichelp@karnataka.gov.in, ದೂ.ಸಂ.: 1902, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, ದೂ.ಸಂ.: 08182-222129 ಅಥವಾ ಸಹಾಯವಾಣಿ 8050770005 ಗಳನ್ನು ಸಂಪರ್ಕಿಸಬಹುದು.




