ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮೇ 8ರಂದು ನಡೆಸಲು ನಿಗದಿಯಾಗಿದ್ದ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ಹೇಳಿದ್ದಾರೆ.
ಸರ್ಕಾರದ ಫೆ.22 ರ ಆದೇಶದನ್ವಯ, ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ಗಳ ಹುದ್ದೆಗಳು, ಸೇವೆಯಲ್ಲಿರುವವರು ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಪರೀಕ್ಷೆಯನ್ನು ನಡೆಸಲು ತಾತ್ಕಾಲಿಕ ವೇಳಾಪಟ್ಟಿ ನಿಗದಿಪಡಿಸಲಾಗಿತ್ತು.
ದೇಶಾದ್ಯಂತ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.




