ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಅಕ್ಟೋಬರ್ 13 ಮತ್ತು 14ರಂದು ಕೋಳಿ ಸಾಕಾಣಿಕೆ ತರಬೇತಿಯನ್ನು ಆಯೋಜಿಸಲಾಗಿದೆ ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
- ಬಸವಣ್ಣನವರ ವಚನಗಳು ವಿಶ್ವವಿದ್ಯಾಲಯಗಳು ಹೇಳಿಕೊಡುವ ಪಾಠಕ್ಕಿಂತ ಕಡಿಮೆಯಲ್ಲ: ಸಾಜೀದ್ ಮುಲ್ಲಾ
- ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಮಸೂದೆ ಅಂಗೀಕಾರವಾಗಿದೆ
- ಮಹಿಳಾ ಮೀಸಲಾತಿ ವಿಷಯದಲ್ಲಿ ಮೋದಿ ಸರ್ಕಾರದಿಂದ ಮಹಿಳೆಯರಿಗೆ ದ್ರೋಹ: ಸಿದ್ದರಾಮಯ್ಯ
- ಕಾಂಗ್ರೆಸ್ಗೆ ಮಹಿಳಾ ಮೀಸಲಾತಿ ಬೇಕಿಲ್ಲ ಎಂಬುದು ಸ್ಪಷ್ಟ: ಬಸವರಾಜ ಬೊಮ್ಮಾಯಿ
- ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಎಷ್ಟು ಹದಗೆಟ್ಟಿದೆ ಎನ್ನುವುದಕ್ಕೆ ಕನ್ನಡಿ: ಆರ್ ಅಶೋಕ್
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ತರಬೇತಿಯು ದಾವಣಗೆರೆ ಜಿಲ್ಲೆಯ ರೈತರಿಗೆ ಮಾತ್ರ ಸೀಮಿತವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.




