ಕೇಂದ್ರ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿದೆ ಎಂದು ಪ್ರಹ್ಲಾದ್ ಜೋಶಿ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ
ಹುಬ್ಬಳ್ಳಿ: ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನುದಾನ ಬಿಡುಗಡೆ ಸಂಬಂಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಸಿಎಂ ಸಿದ್ದರಾಮಯ್ಯ ನಡುವಿನ ವಾಕ್ಸಮರ ತೀವ್ರವಾಗಿದೆ.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಕೇಂದ್ರ ಸರ್ಕಾರ ರಾಜ್ಯಕ್ಕೆ ವಿಶೇಷ ಅನುದಾನ ಬಿಡುಗಡೆ ಮಾಡಿದೆ ಎಂದು ಹೇಳಿರುವ ಸಚಿವ ಪ್ರಹ್ಲಾದ್ ಜೋಶಿ ಅದನ್ನು ಸಾಬೀತುಪಡಿಸಿದರೆ ತಾವು ರಾಜಕೀಯ ನಿವೃತ್ತಿಯಾಗುವುದಾಗಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಪಾಲಿನಲ್ಲಿ ರಾಜ್ಯಕ್ಕೆ ಅನ್ಯಾಯವಾಗುತ್ತಿದೆ. ಈ ಅನ್ಯಾಯವನ್ನು ಸರಿದೂಗಿಸಲು ರಾಜ್ಯಕ್ಕೆ 11,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು 15 ನೇ ಹಣಕಾಸು ಆಯೋಗ ಶಿಫಾರಸ್ಸು ಮಾಡಿದ್ದರೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಇದನ್ನು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕೇಳಬೇಕಲ್ಲವೇ ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ಅನುದಾನ ಕೊಟ್ಟಿದ್ದರೆ ನಾನು ರಾಜಕೀಯ ಬಿಟ್ಟುಬಿಡುತ್ತೇನೆ. ಕೊಟ್ಟಿರದಿದ್ದರೆ ಜೋಶಿ ರಾಜಕೀಯ ಬಿಡುತ್ತಾರೆಯೇ? ರಾಜೀನಾಮೆ ಕೊಡುತ್ತಾರೆಯೇ? ಎಂದು ಸವಾಲೊಡ್ಡಿದರು.
ತೆರಿಗೆ ಪಾಲಿನಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದು 15 ನೇ ಹಣಕಾಸು ಆಯೋಗ ಕೆಲವು ಶಿಫಾರಸ್ಸುಗಳನ್ನು ಮಾಡಿತ್ತು. 5,495 ಕೋಟಿ ವಿಶೇಷ ಅನುದಾನವಾಗಿ ಕೊಡಬೇಕು, ಬೆಂಗಳೂರು ಪೆರಿಫೆರಲ್ ರಿಂಗ್ ರಸ್ತೆಗೆ 3 ಸಾವಿರ ಕೋಟಿ, ಕೆರೆ ಅಭಿವೃದ್ಧಿಗೆ 3 ಸಾವಿರ ಕೋಟಿ ಸೇರಿದಂತೆ ಒಟ್ಟು 11,495 ಕೋಟಿ ಕೊಡಬೇಕು ಎಂದು ಹೇಳಿತ್ತು. ಈ ಹಣ ಇದುವರೆಗೆ ರಾಜ್ಯಕ್ಕೆ ಬಂದಿಲ್ಲ ಎಂದರು.
ಈ ಅನ್ಯಾಯದ ಬಗ್ಗೆ ಬಿಜೆಪಿಯ ಯಾವ ನಾಯಕರೂ ಮಾತನಾಡಲ್ಲ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಂಸದರಾದ ಜಗದೀಶ ಶೆಟ್ಟರ್, ಬಸವರಾಜ ಬೊಮ್ಮಾಯಿ ಯಾವತ್ತಾದರೂ ಮಾತನಾಡಿದ್ದಾರಾ? ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ ಎಂದು ಹೇಳಿದರೆ ಅದು ರಾಜಕೀಯ ಹೇಗಾಗುತ್ತದೆ? ಇದು ರಾಜಕೀಯ ಹೋರಾಟ ಅಲ್ಲ. ನ್ಯಾಯಕ್ಕೋಸ್ಕರ ಹೋರಾಟ. ನಾವು 4.50 ಲಕ್ಷ ಕೋಟಿಗೂ ಹೆಚ್ಚು ತೆರಿಗೆಯನ್ನು ಕೇಂದ್ರ ಸರ್ಕಾರಕ್ಕೆ ನೀಡುತ್ತಿದ್ದೇವೆ. ವಾಪಸ್ ಬರುವುದು ಕೇವಲ 55 ಸಾವಿರ ಕೋಟಿಯಿಂದ 60 ಸಾವಿರ ಕೋಟಿ ಬರುತ್ತಿದೆ. ಇದು ಅನ್ಯಾಯವಲ್ಲವೇ ಎಂದು ಪ್ರಶ್ನಿಸಿದರು.




