ಬೆಂಗಳೂರು: ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣದ ಮಹತ್ವದ ಬೆಳವಣಿಗೆಗಳ ನಡುವೆ ಪೆನ್ ಡ್ರೈವ್ ಬಹಿರಂಗ ಪಡಿಸಿದ್ದಾನೆ ಎಂದು ಹೇಳಲಾಗಿರುವ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ನಾಪತ್ತೆಯಾಗಿದ್ದಾರೆ. ಆತ ವಿದೇಶಕ್ಕೆ ತೆರಳಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
- ಈ ದೇಶ ಕಟ್ಟಿದ್ದೇ ದಲಿತರು, ನೀಲಿ ಶಾಲು ಬಗ್ಗೆ ಮಾತಾಡೋಕೆ ನೀನ್ಯಾವನೋ?
- ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣವೇ ಪದಚ್ಯುತಗೊಳಿಸಿ: ಸಿದ್ದರಾಮಯ್ಯ
- ಸತತ 5 ದಿನ ಬ್ಯಾಂಕ್ಗಳಿಗೆ ಬೀಗ!: ಏನಿರುತ್ತದೆ, ಏನಿಲ್ಲ? ಕಂಪ್ಲೀಟ್ ಡೀಟೈಲ್ಸ್!
- 814 ಉಪನ್ಯಾಸಕರ ನೇಮಕಾತಿಯಲ್ಲಿ ಉರ್ದುಗೆ ಸ್ಥಾನ ಎಲ್ಲಿದೆ?
- ಸಾಲ ಮನ್ನಾ ಮಾಡಿ ರೈತರ ಹಿತ ಕಾಪಾಡಿದ್ದ ಡಾ.ಮನಮೋಹನ್ ಸಿಂಗ್
ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿ ಕಾರ್ತಿಕ್, ಪ್ರಜ್ವಲ್ ಬಳಿ ಕಾರು ಚಾಲಕನಾಗಿ 13 ವರ್ಷ ಕೆಲಸ ಮಾಡಿದ್ದರು. 2 ದಿನದ ಹಿಂದೆ SIT ಮುಂದೆ ಹಾಜರಾಗುವುದಾಗಿ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡಿದ್ದರು.
ಕಾರ್ತಿಕ್ ನಾಪತ್ತೆ ಹಿಂದೆ ಪ್ರಭಾವಿಗಳ ಕೈವಾಡ ಇದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಾರ್ತಿಕ್ ಮಲೇಷಿಯಾಗೆ ಹೋಗಿದ್ದಾನೆ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕಾರ್ತಿಕ್ ನನ್ನು ಮಲೆಷ್ಯಾಗೆ ಕಳಿಸಿದ್ಯಾರು ಎಂದು ಪ್ರಶ್ನಿಸಿದ್ದರು.




