ಬೆಂಗಳೂರು: ಪ್ರಜ್ವಲ್ ರೇವಣ್ಣ ನಮ್ಮ ಸಂಸದರಲ್ಲ. ಇವರೇ ಜೋಡೆತ್ತು ಎಂದು ಅವರ ಜೊತೆಗೆ ಇದ್ದು ಮೊದಲಿಗೆ ಗೆಲ್ಲಿಸಿದ್ದರು. ಇದಕ್ಕೆ ಕಾಂಗ್ರೆಸ್ಸೇ ಉತ್ತರ ನೀಡಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್ ಅಶೋಕ ಹೇಳಿದರು.
- ಕಟ್ಟೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರಿ ಸೇವೆ ಮನೆ ಬಾಗಿಲಿಗೆ ಮಾದರಿ ಕಾರ್ಯಕ್ರಮ
- ಕನ್ನಡ ಸಿನಿಮಾ: ಮುಳುಗುತ್ತಿರುವ ಟೈಟಾನಿಕ್
- RSS ಅನ್ನು ಪ್ರಶ್ನಿಸುವ ಯೋಗ್ಯತೆಯಿದೆಯೇ?: ಆರ್. ಅಶೋಕ್
- ಎಸ್ಐಆರ್ ಎನ್ಯೂಮರೇಷನ್ ಪ್ರಕ್ರಿಯೆ ಬಗ್ಗೆ ಗೊಂದಲ ನಿವಾರಣೆ ಅಗತ್ಯ: ಅಪ್ಸರ್ ಕೊಡ್ಲಿಪೇಟೆ
- ಮಾತಾಡದೇ ನನ್ನೊಳಗೇ ಉಳಿದ ವಿಷಯಗಳು ಹೀಗಿವೆ
ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಪ್ರಜ್ವಲ್ ವಿದೇಶಕ್ಕೆ ಹೋಗುವಾಗ ಕರ್ನಾಟಕ ಪೊಲೀಸರು ಏನು ಮಾಡುತ್ತಿದ್ದರು? ಜಿಲ್ಲಾಧಿಕಾರಿ ಏನು ಮಾಡುತ್ತಿದ್ದರು? ಕಾಂಗ್ರೆಸ್ ಸರ್ಕಾರ ಗುಪ್ತಚರ ದಳ ವಿಫಲವಾಗಿದೆ ಎಂದು ಒಪ್ಪಿಕೊಳ್ಳಲಿ ಎಂದರು.
ಡಿಸಿಎಂ ಡಿ.ಕೆ.ಶಿವಕುಮಾರ್ ಮಾತಿಗೆ ಮೂರು ಕಾಸಿನ ಬೆಲೆ ಇಲ್ಲ. ಭಯೋತ್ಪಾದನಾ ಚಟುವಟಿಕೆಗೆ ಅವರು ಹೇಳಿದ ಮಾತೆಲ್ಲ ಸುಳ್ಳಾಯಿತು. ಅವರು ಗೃಹಸಚಿವ ಅಮಿತ್ ಶಾ ಬಗ್ಗೆ ಹೇಳಿದ ಮಾತಿಗೆ ಬೆಲೆ ಕೊಡಬೇಕಾಗಿಲ್ಲ. 28 ಸ್ಥಾನದಲ್ಲಿ ಕೆಲವು ಸ್ಥಾನಗಳನ್ನು ಜೆಡಿಎಸ್ಗೆ ಬಿಟ್ಟಿದ್ದು, ಅಲ್ಲಿ ಯಾರು ಸ್ಪರ್ಧಿಸಬೇಕೆಂದು ಜೆಡಿಎಸ್ ತೀರ್ಮಾನಿಸುತ್ತದೆ ಎಂದರು.
ಈ ದೇಶದ ಕಾನೂನಿಗೆ, ಸಂವಿಧಾನಕ್ಕೆ ಬಿಜೆಪಿ ಗೌರವ ನೀಡುತ್ತದೆ. ಯಾವುದೇ ಕಾರಣಕ್ಕೂ ಇಂತಹ ಘಟನೆಗೆ ಪಕ್ಷ ಬೆಂಬಲ ನೀಡುವುದಿಲ್ಲ. ಬಿಜೆಪಿಯಿಂದ ಕಠಿಣ ಕ್ರಮ ವಹಿಸಲಾಗುತ್ತದೆ. ಸಿದ್ದರಾಮಯ್ಯನವರು ಅಧಿಕಾರ ಬಿಟ್ಟು ಇಳಿದು ಬಿಜೆಪಿಗೆ ಅಧಿಕಾರ ನೀಡಿದರೆ 24 ಗಂಟೆಯಲ್ಲಿ ಪ್ರಜ್ವಲ್ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಅಥವಾ ಪೊಲೀಸ್ ಇಲಾಖೆಯ ಮೇಲೆ ಹಿಡಿತ ಇಲ್ಲ ಎಂದು ಕಾಂಗ್ರೆಸ್ ಸರ್ಕಾರ ಒಪ್ಪಿಕೊಳ್ಳಲಿ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿಯನ್ನು ಏಕೆ ಪ್ರಶ್ನೆ ಮಾಡಬೇಕು, ರಾಜ್ಯದ ಕಾನೂನು ಪಾಲನೆ ಕೇಂದ್ರ ಸರ್ಕಾರ ಮಾಡಬೇಕೆ ಎಂದು ಪ್ರಶ್ನಿಸಿದರು.




