ಬೆಂಗಳೂರು: ದೇಶಾದ್ಯಂತ ವಿವಾದದ ಬಿರುಗಾಳಿಯನ್ನೇ ಎಬ್ಬಿಸಿದ್ದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಹಾಸನ ಸಂಸದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಒಂದು ತಿಂಗಳ ನಂತರ ವಿಡಿಯೋ ಸಂದೇಶದ ಮೂಲಕ ಅವರು ಪ್ರತ್ಯಕ್ಷವಾಗಿದ್ದು, ಶುಕ್ರವಾರ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ಘೋಷಿಸಿದ್ದಾರೆ.
- ನಕಲಿ ಔಷಧಿ ತಯಾರಕರು, ಮಾರಾಟಗಾರರನ್ನು ಶಿಕ್ಷಿಸಿ
- ಹೈಕಮಾಂಡ್ಗೆ ಕೊಡಲು ಹಣವಿದೆ, ರೈತರಿಗೆ ಕೊಡಲು ಹಣವಿಲ್ಲ: ಆರ್.ಅಶೋಕ
- ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕುರಿತು ಡಿ ಕೆ ಶಿವಕುಮಾರ್ ಹೇಳಿದ್ದೇನು?
- ಬರ ಘೋಷಣೆಗಿರುವ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಸಲಿ: ಡಾ. ಜಿ. ಪರಮೇಶ್ವರ್
- ಧನುಷ್ ನಟನೆಯ ‘OM’ ಬಿಡುಗಡೆ ದಿನಾಂಕ ಮುಂದೂಡಿಕೆ!
ಪ್ರಕರಣ ಬಹಿರಂಗವಾದ ನಂತರ ಬಂಧನದ ಬೀತಿಯಿಂದ ತಲೆಮರೆಸಿಕೊಂಡಿದ್ದ ಅವರು, ಇಂದು ಇದ್ದಕ್ಕಿದ್ದಂತೆ ವಿಡಿಯೋ ಒಂದನ್ನು ಹರಿಬಿಟ್ಟಿದ್ದು, ತಾವು ಮೇ 31ರಂದು ಸ್ವದೇಶಕ್ಕೆ ಆಗಮಿಸಿ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.
ಅಜ್ಞಾತ ಸ್ಥಳದಿಂದ 2 ನಿಮಿಷ 57 ಸೆಕೆಂಡ್ಗಳ ವಿಡಿಯೋ ಮಾಡಿದ್ದು, ಎಲ್ಲಿಂದ ಈ ವಿಡಿಯೋ ಮಾಡಿ ಬಿಡುಗಡೆ ಮಾಡಿದ್ದಾರೆ ಎಂಬುದು ರಹಸ್ಯವಾಗಿಯೇ ಉಳಿದಿದೆ. ಇನ್ನೂ ತಮ್ಮ ವಿಡಿಯೋದಲ್ಲಿ ತಮ್ಮ ಕುಟುಂಬದ ವಿರುದ್ಧ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಕಾನೂನು ಮೂಲಕ ಹೋರಾಟ ನಡೆಸುತ್ತೇನೆ ಎಂದಿದ್ದಾರೆ.
ವಿಡಿಯೋದಲ್ಲಿ ತಂದೆ, ತಾಯಿ, ತಾತ ಮತ್ತು ಕುಮಾರಣ್ಣನ ಕ್ಷಮೆ ಕೇಳಿದ್ದಾರೆ. ಅಲ್ಲದೆ, ಪಕ್ಷದ ಕಾರ್ಯಕರ್ತರ ಹಾಗೂ ನಾಡಿನ ಜನರ ಕ್ಷಮೆ ಯಾಚಿಸಿದ್ದಾರೆ. ವಿದೇಶಕ್ಕೆ ಹೋಗುವುದು ಪೂರ್ವ ನಿರ್ಧಾರವಾಗಿತ್ತು. ನಾನು ಪ್ರಯಾಣ ಕೈಗೊಂಡಾಗ ಯಾವುದೇ ಪ್ರಕರಣ ದಾಖಲಾಗಿರಲಿಲ್ಲ ಎಂದಿದ್ದಾರೆ.
ವಿದೇಶದಲ್ಲಿ ಯೂ ಟ್ಯೂಬ್ ನ್ಯೂಸ್ ನೋಡಿದಾಗ ನನ್ನ ಮೇಲೆ ಗಂಭೀರ ಆರೋಪ ಕೇಳಿಬಂದಿರುವುದು ಗೊತ್ತಾಯಿತು. ಎಸ್ಐಟಿ ರಚನೆ ಮಾಡಿ ನೋಟಿಸ್ ನೀಡಿರುವುದು ತಿಳಿಯಿತು. ನಾನು ರಾಜಕೀಯವಾಗಿ ಬೆಳೆಯಬಾರದು ಎಂಬ ಕಾರಣಕ್ಕೆ ನನ್ನ ವಿರುದ್ಧ ಪಿತೂರಿ ಮಾಡಿದ್ದಾರೆ ಎಂದು ಹೇಳಿದ್ದಾರೆ.




