ಬೆಂಗಳೂರು: ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸಿಲುಕಿರುವ ಹಾಸನ ಕ್ಷೇತ್ರದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ನಿಂದ ಅಮಾನತುಗೊಳಿಸಲಾಗಿದೆ.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಸೂಚನೆಯ ಮೇರೆಗೆ ಈ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಅಮಾನತು ಆದೇಶ ಜಾರಿಗೆ ಬಂದಿದೆ ಎಂದು ಪಕ್ಷದ ಮಹಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಸ್ವರೂಪದ ಆರೋಪಗಳು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆ ಸುಧೀರ್ಘ ಚರ್ಚೆ ನಡೆದಿದೆ. ಆನಂತರ ದೇವೇಗೌಡರ ಸೂಚನೆಯನ್ನು ಆಧರಿಸಿ ಪಕ್ಷದ ಸಂವಿಧಾನದ ಅಡಿಯಲ್ಲಿ ರೂಪಿತಗೊಂಡ ನಿಯಮಗಳ ಅನುಸಾರ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.




