ಪ್ರಶಾಂತ್ ಕಿಶೋರ್ ಬಿಜೆಪಿ ವಕ್ತಾರರಾಗಿ ನೇಮಕವಾಗಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪತ್ರವೊಂದು ಹರಿದಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರ ಹೆಸರಿನಲ್ಲಿ ಇರುವ ಈ ಪತ್ರದಲ್ಲಿ ಪ್ರಶಾಂತ್ ಕಿಶೋರ್ ಅವರನ್ನು ಬಿಜೆಪಿ ರಾಷ್ಟ್ರೀಯ ವಕ್ತಾರರಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಆದೇಶ ಹೊರಡಿಸಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
- ಗದಗವನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್ ಕೆ ಪಾಟೀಲ್
- ತುಳು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ: ಸಿದ್ದರಾಮಯ್ಯ
- ಪೆರಿಯಾರ್ ಆಗ್ನೇಯ ಏಷ್ಯಾದ ಸಾಕ್ರೆಟಿಸ್: ಎ.ಜಿ.ಕಾಂಬಳೆ
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
ಬಿಜೆಪಿ ಹೆಸರಿನಲ್ಲಿ ಇಂತಹ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಶಾಂತ್ ಕಿಶೋರ್ ಅವರನ್ನು ಪಕ್ಷದ ರಾಷ್ಟ್ರೀಯ ಮುಖ್ಯ ವಕ್ತಾರರನ್ನಾಗಿ ನೇಮಿಸಲಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ಈ ಪತ್ರವನ್ನು ನಿಜವೆಂದು ಪರಿಗಣಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಜಾಲತಾಣಿಗರು ವೈರಲ್ ಮಾಡಿದ್ದಾರೆ.
ಆದರೆ ಈ ವೈರಲ್ ಆಗಿರುವ ಪತ್ರ ನಕಲಿಯಾಗಿದೆ. ಜನ್ ಸೂರಜ್ ಪಕ್ಷದ ಮುಖ್ಯಸ್ಥ ಪ್ರಶಾಂತ್ ಕಿಶೋರ್ ಮತ್ತು ಬಿಜೆಪಿ ರಾಷ್ಟ್ರೀಯ ಸಂಯೋಜಕ ಅರುಣ್ ಸಿಂಗ್ ಸದರಿ ಪತ್ರವನ್ನು ನಕಲಿ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಅಸಲಿಗೆ ವೈರಲ್ ಆಗುತ್ತಿರುವ ಪತ್ರದಲ್ಲಿ ಏನಿದೆ?: ಜಾರ್ಖಂಡ್ ಪೋಸ್ಟ್ ನಲ್ಲಿ ಹಂಚಿಕೊಂಡಿರುವ ಪತ್ರದಲ್ಲಿ “ಸಾಂಸ್ಥಿಕ ನೇಮಕಾತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಶ್ರೀ ಪ್ರಶಾಂತ್ ಕಿಶೋರ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಮುಖ್ಯ ವಕ್ತಾರರನ್ನಾಗಿ ನೇಮಿಸಿದ್ದಾರೆ. ಈ ನೇಮಕಾತಿ ತಕ್ಷಣವೇ ಜಾರಿಗೆ ಬರುತ್ತದೆ” ಎಂದು ಉಲ್ಲೇಖಿಸಲಾಗಿದೆ.
ಕನ್ನಡದಲ್ಲಿ ಅನುವಾದ: “ಸಾಂಸ್ಥಿಕ ನೇಮಕಾತಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಶ್ರೀ ಜಗತ್ ಪ್ರಕಾಶ್ ನಡ್ಡಾ ಅವರು ಶ್ರೀ ಪ್ರಶಾಂತ್ ಕಿಶೋರ್ ಅವರನ್ನು ಬಿಜೆಪಿಯ ರಾಷ್ಟ್ರೀಯ ಮುಖ್ಯ ವಕ್ತಾರರನ್ನಾಗಿ ನೇಮಿಸಿದ್ದಾರೆ. ಈ ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬರಲಿದೆ”. ಈ ಪತ್ರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಸಹಿ ಹಾಕಿದ್ದಾರೆ ಎನ್ನುವಂತೆ ರೂಪಿಸಲಾಗಿದೆ.
ಕಳೆದ ಜನವರಿ ತಿಂಗಳಿಂದ ದೇಶದ ವಿವಿಧ ಸುದ್ದಿ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿರುವ ಚುನಾವಣಾ ತಂತ್ರಜ್ಞ ಪ್ರಶಾಂತ್ ಕಿಶೋರ್, 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯಲಿದೆ ಎಂದು ಗಟ್ಟಿ ದನಿಯಲ್ಲಿ ಹೇಳುತ್ತಿದ್ದಾರೆ.
2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡಿದ್ದರು. ಮುಂದಿನ ದಿನಗಳಲ್ಲಿ ಕಾಂಗ್ರೆಸ್, ಟಿಎಂಸಿ, ಜೆಡಿಯು, ಆರ್‌ಜೆಡಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳೊಂದಿಗೆ ಕೂಡ ಅವರು ಕೆಲಸ ಮಾಡಿದರು.
ಒಟ್ಟಿನಲ್ಲಿ ಎಲ್ಲ ಕಡೆ ಸಂಶೋಧನೆ ನಡೆಸಿದ ಮೇಲೆ ಅಂತಿಮವಾಗಿ, ನಕಲಿ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ. ಸದರಿ ಫೋಟೋ ಕುರಿತು ನಡೆಸಿದ ಹುಡುಕಾಟದ ನಂತರ jharkhand.mukti.morcha.fan ಬಳಕೆದಾರರ ಪೇಜ್ ನಲ್ಲಿ ಫೋಟೋ ಸಿಕ್ಕಿದ್ದು, ಇದರಲ್ಲಿ ಕೇವಲ 100 ಅನುಯಾಯಿಗಳಿದ್ದಾರೆ.
ತೀರ್ಮಾನ: ತನಿಖೆಯಲ್ಲಿ ಈ ಫೋಟೋ ನಕಲಿ ಎಂದು ತಿಳಿದುಬಂದಿದೆ. ಅಲ್ಲದೆ ಪ್ರಶಾಂತ್ ಕಿಶೋರ್ ಬಿಜೆಪಿ ಸೇರಿಲ್ಲ. ಬಿಜೆಪಿ ರಾಷ್ಟ್ರೀಯ ಸಂಯೋಜಕ ಅರುಣ್ ಸಿಂಗ್ ಅವರು ಕೂಡ ಈ ಪತ್ರ ನಕಲಿ ಎಂದಿದ್ದಾರೆ.




