ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವೃತ್ತಿ ರಂಗಭೂಮಿ ರಂಗಾಯಣ ದಾವಣಗೆರೆ ವತಿಯಿಂದ ಅಕ್ಟೋಬರ್ 13ರಂದು ಬೆಳಿಗ್ಗೆ 11 ಗಂಟೆಗೆ ನಗರದ ದೃಶ್ಯಕಲಾ ಮಹಾವಿದ್ಯಾಲಯದಲ್ಲಿ ಪ್ರತಿಗಂಧರ್ವ ನೂತನ ನಾಟಕ ಕಥಾಪೂಜೆ (ಕಲಾವಿದರಿಗೆ ತರಬೇತಿ ಆರಂಭ) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕಾರ್ಯಕ್ರಮವನ್ನು ದೃಶ್ಯಕಲಾ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಡ. ಸತೀಶ ಕುಮಾರ ಪಿ ವಲ್ಲೇಪುರೆ ಉದ್ಘಾಟಿಸುವರು. ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕರ್ನಾಟಕ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ ನಾಗರಾಜಮೂರ್ತಿ, ಕರ್ನಾಟಕ ರಂಗಸಮಾಜದ ಸದಸ್ಯ ಡಾ.ಕೆ.ರಾಮಕೃಷ್ಣಯ್ಯ, ನಾಟಕಕಾರ ಡಾ.ರಾಜಪ್ಪ ದಳವಾಯಿ, ರಂಗ ನಿರ್ದೇಶಕ ಮಾಲತೇಶ ಬಡಿಗೇರ ಭಾಗವಹಿಸುವರು.




