ಬಳ್ಳಾರಿ: ಕಲ್ಯಾಣ ಕರ್ನಾಟಕ ವಿಭಾಗದಲ್ಲಿ ಶಿಕ್ಷಣದಲ್ಲಿ ಗುಣಾತ್ಮಕ ಪ್ರಗತಿ ಸಾಧಿಸಲು 2024-2025ನೇ ಸಾಲಿನಿಂದ ಪ್ರಾಥಮಿಕ ಹಂತದಲ್ಲಿ ಅರ್ಹ ಸರ್ಕಾರಿ ಶಾಲೆಗಳಲ್ಲಿ “ಪೂರ್ವ ಪ್ರಾಥಮಿಕ’’ ಭಾಗವಾಗಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆ (ಆಡಳಿತ) ಉಪನಿರ್ದೇಶಕರಾದ ಬಿ.ಉಮಾದೇವಿ ತಿಳಿಸಿದ್ದಾರೆ.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಮಕ್ಕಳಿಗೆ ಆರಂಭಿಕ ಹಂತದಲ್ಲಿ ಭದ್ರ ಬುನಾದಿ ಹಾಕಲು ಮತ್ತು ಗ್ರಾಮೀಣ ಪ್ರದೇಶದ ಮಕ್ಕಳಿಗೆ ಗುಣಾತ್ಮಕ ಆರಂಭಿಕ ಶಿಕ್ಷಣದ ಸೌಲಭ್ಯವನ್ನು ಕಲ್ಪಿಸಿಕೊಡುವುದು ಸರ್ಕಾರದ ಉದ್ದೇಶವಾಗಿದೆ. ಇದಕ್ಕಾಗಿ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಉತ್ತಮ ಹೆಜ್ಜೆಯನ್ನಿಟ್ಟು ‘ಅಕ್ಷರ ಆವಿಷ್ಕಾರ’ ಯೋಜನೆಗೆ ಕೈಜೋಡಿಸಿದೆ.
ಜಿಲ್ಲೆಯಲ್ಲಿ ಒಟ್ಟು 119 ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದ್ದು, ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಸದುಪಯೋಗಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




