ಎಂಸಿಸಿ ಚುನಾವಣೆ:
ಮೈಸೂರು: ಸೋಷಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ ಕ್ಷೇತ್ರದ ನಾಯಕರ ವಿಶೇಷ ಸಭೆ ಮೈಸೂರಿನಲ್ಲಿ ಜರುಗಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಸಭೆಗೆ ಜಿಲ್ಲಾಧ್ಯಕ್ಷ ರಫತ್ ಖಾನ್ ಅವರು ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಉಪಾಧ್ಯಕ್ಷ ಹಾಗೂ ಎಂಸಿಸಿ ಚುನಾವಣೆ ಉಸ್ತುವಾರಿ ಅಬ್ದುಲ್ ಹನ್ನಾನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣೆ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ, ರಾಜ್ಯ ಕಾರ್ಯದರ್ಶಿಗಳಾದ ಅಪ್ಸರ್ (ಕೆ.ಆರ್.ನಗರ) ಮತ್ತು ಅಕ್ರಮ್ ಮೌಲಾನಾ, ರಾಜ್ಯ ಸಮಿತಿ ಸದಸ್ಯ ಅಬ್ರಾರ್ ಅಹ್ಮದ್ ಸಭೆಯಲ್ಲಿ ಭಾಗವಹಿಸಿದ್ದರು.
ಸಭೆಯಲ್ಲಿ ಜಿಲ್ಲಾ, ವಿಧಾನಸಭಾ ಹಾಗೂ ಬೂತ್ ಮಟ್ಟದ ಪ್ರಮುಖ ಪದಾಧಿಕಾರಿಗಳು ಭಾಗವಹಿಸಿ ಮುಂಬರುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಹಾಗೂ ವಿಶೇಷವಾಗಿ ಮೈಸೂರು ಎಂಸಿಸಿ ಚುನಾವಣೆಗಳ ಪೂರ್ವ ತಯಾರಿಗಳ ಕುರಿತು ಚರ್ಚೆ ನಡೆಸಿದರು.
ಸಭೆಯಲ್ಲಿ ಸಂಘಟನಾ ಸ್ಥಿತಿಗತಿ, ಬೂತ್ ಹಾಗೂ ವಾರ್ಡ್ ಮಟ್ಟದ ಕಾರ್ಯಯೋಜನೆ, ಸಮಿತಿಗಳ ವರದಿಗಳು ಹಾಗೂ ಜವಾಬ್ದಾರಿಗಳ ಹಂಚಿಕೆ ಕುರಿತು ವಿಶ್ಲೇಷಣೆ ನಡೆಯಿತು.
ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್ ಅವರು ಮಾತನಾಡಿ, ಸ್ಥಳೀಯ ಸಂಸ್ಥೆ ಚುನಾವಣೆಗಳ ವಿಳಂಬ ಮತ್ತು ಆಡಳಿತದ ನಿರ್ಲಕ್ಷ್ಯಕ್ಕೆ ನಾವು ಬಲಿಷ್ಠ ಉತ್ತರ ನೀಡಬೇಕು ಎಂದರು.
ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ಮಾತನಾಡಿ, ಬೂತ್ ಮಟ್ಟದಲ್ಲಿ ಸಂಘಟನೆ ಬಲವರ್ಧನೆ SDPIಗೆ ಪ್ರಮುಖ ಆಯಾಮ. ಪ್ರತಿ ಕಾರ್ಯಕರ್ತನು ‘ಬೂತ್ ಗೆಲುವು ನನ್ನ ನಿಲುವು’ ಎಂಬ ಘೋಷಣೆಯಡಿ ನಿರಂತರ ಶ್ರಮಿಸಬೇಕು ಎಂದು ಕಿವಿಮಾತು ಹೇಳಿದರು.
ಸಭೆಯಲ್ಲಿ ಜಿಲ್ಲೆಯ ವಿವಿಧ ವಿಧಾನಸಭಾ ಕ್ಷೇತ್ರಗಳ ಪ್ರತಿನಿಧಿಗಳು ತಮ್ಮ ತಮ್ಮ ಕ್ಷೇತ್ರದ ಸಂಘಟನೆ ಬಲವರ್ಧನೆಗಾಗಿ ತಂತ್ರಮೂಲಕ ಪ್ರಸ್ತಾವನೆಗಳನ್ನು ಮಂಡಿಸಿದರು. ಕ್ಷೇತ್ರವಾರು ತಂತ್ರ ಹಾಗೂ ಮುಂದಿನ ಹಂತದ ಚಟುವಟಿಕೆಗಳನ್ನು ಚುರುಕುಗೊಳಿಸಲು ಶೀಘ್ರದಲ್ಲೇ ಬೂತ್ ಮಟ್ಟದ ಕಾರ್ಯಕರ್ತರಿಗೆ ಒಂದು ದಿನದ ಚುನಾವಣಾ ನಿರ್ವಹಣಾ ತರಬೇತಿ ಕಾರ್ಯಾಗಾರ ನಡೆಸಲು ತೀರ್ಮಾನ ಕೈಗೊಳ್ಳಲಾಯಿತು.
ಜಿಲ್ಲಾ ಉಪಾಧ್ಯಕ್ಷ ಮಹಮ್ಮದ್ ಸಫಿ ಉಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಫಿರ್ದೋಸ್, ಸಂಘಟನಾ ಪ್ರಧಾನ ಕಾರ್ಯದರ್ಶಿ ಅಜೀಮ್, ಕಾರ್ಯದರ್ಶಿ ಫರ್ದೀನ್ ಮತ್ತು ಅಕ್ಬರ್ ರವರು ಹಾಗೂ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಸಭೆಯಲ್ಲಿ ಹಾಜರಿದ್ದರು.




