ಕಾರವಾರ: ಜನವರಿ 26 ರಂದು ಕಾರವಾರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಜರುಗುವ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣೆಯನ್ನು ಜಿಲ್ಲೆಯಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಸೂಚಿಸಿದರು.
- ಸರಳ, ವೇಗ, ಪಾರದರ್ಶಕ, ಜನಸ್ನೇಹಿ ಆಸ್ತಿ ದಾಖಲೆ ವ್ಯವಸ್ಥೆ ಇ-ಆಸ್ತಿ 2.0: ಕೃಷ್ಣ ಬೈರೇಗೌಡ
- ರೈತರಿಗೆ ನಿರಂತರ 6 ತಾಸು ಸಮರ್ಪಕ ವಿದ್ಯುತ್ ಕುಡಿಯುವ ನೀರು ಪೂರೈಕೆಗೆ ಆದ್ಯತೆ
- ಕೆಟಿವಿಎ ಗೃಹ ಪತ್ರಿಕೆ ಟಿವಿ – ಠೀವಿ ಪುನರಾರಂಭ
- ಸಿಎನ್ಎನ್, ಎಂಎಸ್ಎನ್ಬಿಸಿ, ಪಾಲಿಟಿಕೋಗೆ ಶ್ವೇತಭವನ ಪ್ರವೇಶ ನಿಷೇಧಿಸಿದ ಟ್ರಂಪ್
- ಕೆರೆಗಳ ಪುನಶ್ಚೇತನಕ್ಕೆ ₹150 ಕೋಟಿ ವೆಚ್ಚದ ವಿಶ್ವಬ್ಯಾಂಕ್ ಯೋಜನೆ: ಈಶ್ವರ್ ಖಂಡ್ರೆ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಗಣರಾಜ್ಯೋತ್ಸವ ಆಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಅಭಿನಂದಿಸಲು ಸಾಧಕರ ಪಟ್ಟಿಯನ್ನು ಸಾಕಷ್ಟು ಮುಂಚಿತವಾಗಿ ನೀಡುವಂತೆ ಇಲಖಾಧಿಕಾರಿಗಳಿಗೆ ತಿಳಿಸಿದ ಜಿಲ್ಲಾಧಿಕಾರಿಗಳು, ಕಾರ್ಯಕ್ರಮದ ಯಾವುದೇ ಸಂದರ್ಭದಲ್ಲಿ ಶಿಷ್ಠಾಚಾರದ ಉಲ್ಲಂಘನೆ ಆಗದಂತೆ ಎಲ್ಲಾ ಅಧಿಕಾರಿಗಳು ಎಚ್ಚರ ವಹಿಸುವಂತೆ ಸೂಚಿಸಿದರು.
ಗಣರಾಜ್ಯೋತ್ಸವ ಕಾರ್ಯಕ್ರಮದ ಕುರಿತು ಆಹ್ವಾನ ಪತ್ರಿಕೆಗಳನ್ನು ಶಿಷ್ಟಾಚಾರದಂತೆ ಮುದ್ರಿಸಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳಿಗೆ ತಲುಪಿಸಬೇಕು. ಕಾರ್ಯಕ್ರಮದಲ್ಲಿ ಪೊಲೀಸ್, ಗೃಹರಕ್ಷಕ, ಅರಣ್ಯ, ಎನ್.ಸಿ.ಸಿ., ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿಂದ ಆಕರ್ಷಕ ಪಥ ಸಂಚಲನ ಏರ್ಪಡಿಸುವಂತೆ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವಂತೆ ತಿಳಿಸಿದರು.
ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವ ನಿಟ್ಟಿನಲ್ಲಿ ವಿವಿಧ ಅಧಿಕಾರಿಗಳ ನೇತೃತ್ವದಲ್ಲಿ ಹಲವು ಸಮಿತಿಗಳನ್ನು ರಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಸಮಿತಿಯ ಸದಸ್ಯರು ತಮ್ಮ ಜವಾಬ್ದಾರಿಯನ್ನು ಅರಿತು ಸಮನ್ವಯದಿಂದ ಯಾವುದೇ ಲೋಪವಾಗದಂತೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಹಾಗೂ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಉಪ ವಿಭಾಗಾಧಿಕಾರಿ ಕನಿಷ್ಕ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.




