ಬೆಂಗಳೂರು: ದಳಪತಿಗಳ ಭದ್ರಕೋಟೆ ಮಾಜಿ ಪ್ರಧಾನಿ ದೇವೇಗೌಡರ ತವರು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಡೆಸಿದ ಶಕ್ತಿ ಪ್ರದರ್ಶನಕ್ಕೆ ಭರ್ಜರಿಯಾಗಿ ಎದುರೇಟು ನೀಡಲು ಜೆಡಿಎಸ್ ಸಜ್ಜಾಗುತ್ತಿದೆ.
- ದೇಶದ ರಾಜ್ಯಗಳಲ್ಲಿ ಕೊನೆಯ ಬಾರಿ ಕಾಂಗ್ರೆಸ್ ಸಿಎಂ ಇದ್ದದ್ದು ಯಾವಾಗ?
- ನಮ್ಮ ತಲೆಮಾರಿನ ರಾಜಕಾರಣಿಗಳು, ಭವಿಷ್ಯದ ಯುವ ನಾಯಕರಿಗೆ ಸಿದ್ದರಾಮಯ್ಯ ಸ್ಫೂರ್ತಿ: ಪ್ರಿಯಾಂಕ್ ಖರ್ಗೆ
- ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಸಿದ್ದರಾಮಯ್ಯ ಹೇಳಿದ್ದೇನು?
- ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ: ಯಾರು, ಏನೆಂದರು?
- ಹಣಕಾಸು ಮಂತ್ರಿಗಳಾಗಿ ಸಿದ್ದರಾಮಯ್ಯ ಸಾಧಿಸಿದ ಆರ್ಥಿಕ ಶಿಸ್ತು ಒಂದು ಪಠ್ಯದಂತಿದೆ: ಬಿ ಶ್ರೀಪಾದ ಭಟ್
ಚನ್ನಪಟ್ಟಣ ವಿಧಾನಸಭೆ ಕ್ಷೇತ್ರ ಸೇರಿದಂತೆ ಇತ್ತೀಚೆಗೆ ನಡೆದ ಮೂರು ಉಪಚುನಾವಣೆ ಸೋಲಿನಿಂದ ಜೆಡಿಎಸ್ ಮೈತ್ರಿಕೂಟ ಅಧೀರಗೊಂಡಿಲ್ಲ. ಕಾರ್ಯಕರ್ತರಲ್ಲಿ ಇನ್ನೂ ಹೆಚ್ಚು ಉತ್ಸಾಹ ಮೂಡಿದೆ ಎಂಬ ಸಂದೇಶ ರವಾನಿಸುವ ದೃಷ್ಟಿಯಿಂದ ಈ ಸಮಾವೇಶ ಹಮ್ಮಿಕೊಳ್ಳಲಾಗುತ್ತಿದೆ.
ಕೇಂದ್ರ ಕೈಗಾರಿಕೆ ಸಚಿವ ಹಾಗೂ ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ಹೆಸರಿನಲ್ಲಿ ಸಕ್ಕರೆ ನಾಡು ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟ ಶಕ್ತಿ ಪ್ರದರ್ಶನ ನಡೆಸಲು ಸಜ್ಜಾಗಿದೆ.
ಬಿಜೆಪಿ ರಾಷ್ಟ್ರೀಯ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಕಾಂಗ್ರೆಸ್ ಹಾಸನದಲ್ಲಿ ನಡೆಸಿದ ಸಮಾವೇಶವನ್ನು ಮೀರಿಸುವ ರೀತಿಯಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆಗಳು ಆರಂಭಗೊಂಡಿವೆ ಎಂದು ಉನ್ನತ ಮೂಲಗಳಿಂದ ತಿಳಿದುಬಂದಿದೆ.
ಈ ಮೂಲಕ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಹಳೆ ಮೈಸೂರು ಪ್ರಾಂತ್ಯದಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿಕೂಟ ಪ್ರಾಬಲ್ಯ ಸಾಧಿಸಲು ಈ ಸಮಾವೇಶದ ಮೂಲಕ ಕಾರ್ಯತಂತ್ರ ರೂಪಿಸಲು ಸಿದ್ದತೆ ನಡೆಯುತ್ತಿದೆ.
ಡಿ.15 ರಂದು ಮಂಡ್ಯದ ಸರ್ ಎಂ.ವಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಕಾರ್ಯಕ್ರಮಕ್ಕೆ ಲಕ್ಷಕ್ಕೂ ಹೆಚ್ಚು ಜನರನ್ನ ಸೇರಿಸುವ ಗುರಿಯನ್ನು ಜೆಡಿಎಸ್ ನಾಯಕರು ಹೊಂದಿದ್ದಾರೆ. ಆ ಮೂಲಕ ಚನ್ನಪಟ್ಟಣ ಸೋಲಿನ ಹತಾಶೆಯಲ್ಲಿರುವ ಜೆಡಿಎಸ್ ಕಾರ್ಯಕರ್ತರನ್ನು ಹುರಿದುಂಬಿಸುವ ಹಾಗೂ ಹಳೇ ಮೈಸೂರು ಭಾಗದಲ್ಲಿ ಮೈತ್ರಿ ಪಕ್ಷಗಳ ಪ್ರಾಬಲ್ಯ ಕುಗ್ಗದಂತೆ, ಗಟ್ಟಿಗೊಳಿಸಲು ಚಿಂತನೆ ನಡೆಸಲಾಗಿದೆ.




