ಬೆಂಗಳೂರು: ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯಾಗಿಲ್ಲ ಎಂದು ಸುಳ್ಳು ಜಾಹೀರಾತು ನೀಡಿರುವ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಳ್ಳು ಜಾಹೀರಾತು ನೀಡಿದ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವಂತೆ ಸಿಎಂ ಸಿದ್ದರಾಮಯ್ಯ ಈಗಾಗಲೇ ಸೂಚನೆ ನೀಡಿದ್ದಾರೆ. ಎಲ್ಲಾ ರೀತಿಯ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ. ಮತ್ತೊಮ್ಮೆ ಜಾಹೀರಾತು ಪರಿಶೀಲಿಸಿ ಮೊಕದ್ದಮೆ ದಾಖಲಿಸಲಾಗುವುದು ಎಂದರು.
‘ಕರ್ನಾಟಕದಲ್ಲಿ ಅಭಿವೃದ್ಧಿ ವಿಚಾರಗಳನ್ನು ಬದಿಗೊತ್ತಿ ಗ್ಯಾರಂಟಿ ಘೋಷಣೆ ಮಾಡಲಾಗಿತ್ತು. ಆದರೆ ಅನುಷ್ಠಾನ ಮಾಡಿಲ್ಲ. ಕಾಂಗ್ರೆಸ್ ಸುಳ್ಳು ಹೇಳುತ್ತಿದೆ’ ಎಂಬ ರೀತಿಯಲ್ಲಿ ಜಾಹೀರಾತು ನೀಡಿ ರಾಜ್ಯ ಸರ್ಕಾರವನ್ನು ಅವಮಾನ ಮಾಡಲಾಗಿದೆ. ಹಾಗಾಗಿ ಕಾನೂನು ಕ್ರಮ ಅನಿವಾರ್ಯವಾಗಿದೆ ಎಂದರು.




