ಬೆಂಗಳೂರು: ಸಾಹಿತ್ಯ ಅಕಾಡೆಮಿ ಸೇರಿದಂತೆ ರಾಜ್ಯದ ವಿವಿಧ ಸಾಂಸ್ಕೃತಿಕ ಅಕಾಡೆಮಿಗಳ ಅಧ್ಯಕ್ಷರು ಮತ್ತು ಸದಸ್ಯರು ರಾಜಕೀಯ ಒಲವು -ನಿಲುವು ಹೊಂದಿದ್ದಾರೆ. ಹೀಗಾಗಿ ಅವರು ಪಕ್ಷದ ಕಚೇರಿಗೆ ಬಂದಿದ್ದರಲ್ಲಿ ತಪ್ಪೇನು ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
- ವ್ಯಕ್ತಿಯನ್ನು ಗುರುತಿಸಿದರೆ ಸಮಾಜವನ್ನೇ ಗುರುತಿಸಿದಂತೆ: ಡಾ. ಎ ಆರ್ ಗೋವಿಂದಸ್ವಾಮಿ
- ಸಂವಿಧಾನ ಪೀಠಿಕೆ ದೇಶದ ಆತ್ಮವಿದ್ದಂತೆ: ಆದಿತ್ಯ ಚಟರ್ಜಿ
- ಕುಸಿಯುತ್ತಿರುವ ಪ್ರಜಾಪ್ರಭುತ್ವದ ವ್ಯಾಪ್ತಿ ಮತ್ತು ದೀರ್ಘಾವಧಿ ಪ್ರಧಾನಿಯ ಸಾಧನೆಗಳು
- ಜೀರಾ ರೈಸ್, ಘೀ ರೈಸ್ ಮತ್ತು ಲೆಮನ್ ರೈಸ್ ಮಾಡುವ ಸರಳ ವಿಧಾನ
- ಸಮಾಧಾನ್ ಸಮಾರೋಹ್ ಯಶಸ್ವಿಗೊಳಿಸಿ: ಡಾ.ಶಾಲಿನಿ ರಜನೀಶ್
ಕೆಲ ದಿನಗಳ ಹಿಂದೆ ಕೆಪಿಸಿಸಿ ಕಚೇರಿಗೆ ಸಾಹಿತ್ಯ, ಸಂಸ್ಕೃತಿ ಮತ್ತು ಇತರ ಅಕಾಡೆಮಿಗಳ ಅಧ್ಯಕ್ಷರ ಮತ್ತು ಪದಾಧಿಕಾರಿಗಳನ್ನು ಕರೆಸಿಕೊಂಡ ವಿಚಾರವಾಗಿ ಸಾರ್ವಜನಿಕವಾಗಿ ಆಕ್ಷೇಪ ವ್ಯಕ್ತ ಆಗುತ್ತಿರುವ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದಾಗ, ಅವರು ತಮ್ಮ ಕ್ರಮವನ್ನು ಬಲವಾಗಿ ಸಮರ್ಥಿಸಿಕೊಂಡರು.
ಎಲ್ಲ ಸರ್ಕಾರಗಳು ಸಾಂಸ್ಕೃತಿಕ ಸಂಸ್ಥೆಗಳಿಗೆ ನೇಮಕ ಮಾಡುವಾಗ ಅರ್ಹ ಅಭ್ಯರ್ಥಿಗಳ ರಾಜಕೀಯ ಒಲವು ನಿಲುವುಗಳನ್ನು ಗಮನಿಸಿ ಅವಕಾಶ ನೀಡುತ್ತದೆ. ಅದರಂತೆ ಈಗಲೂ ನೇಮಕಾತಿ ಮಾಡಲಾಗಿದೆ. ನೇಮಕಗೊಂಡವರನ್ನು ಪಕ್ಷದ ಕಚೇರಿಗೆ ಕರೆಯಲಾಗಿತ್ತು. ಇದರಲ್ಲಿ ಇಷ್ಟ ಇದ್ದವರು ಬಂದಿದ್ದಾರೆ. ಕೆಲವರು ಬಂದಿಲ್ಲ. ಇದಕ್ಕೆ ವಿವಾದ ಮಾಡುವುದರಲ್ಲಿ ಅರ್ಥ ಇಲ್ಲ ಎಂದರು.
ಸಾಂಸ್ಕೃತಿಕ ಸಂಸ್ಥೆಗಳು ಸ್ವಾಯತ್ತ ಸಂಸ್ಥೆಗಳು ಎಂದ ಮಾತ್ರಕ್ಕೆ ಅವುಗಳ ಅಧ್ಯಕ್ಷರು ಮತ್ತು ಸದಸ್ಯರಿಗೆ ರಾಜಕೀಯ ಒಲವು ನಿಲುವು ಇರಬಾರದು ಎಂದೇನಿಲ್ಲ. ಅವರುಗಳು ಕೂಡ ನಮ್ಮಂತೆ ರಾಜಕಾರಣಿಗಳೇ ಆಗಿದ್ದಾರೆ ಎಂದರು.


