ಬೆಂಗಳೂರು: ಕೃಷ್ಣಾ ನದಿ ನೀರು ಹಂಚಿಕೆ ಕುರಿತಾಗಿ ನ್ಯಾಯ ಮಂಡಳಿಯ ಅಂತಿಮ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಇದನ್ನು ಅಧಿಸೂಚನೆ ಮೂಲಕ ಪ್ರಕಟಿಸಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು.
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
- ಅಂಬೇಡ್ಕರ್ ಸಂವಿಧಾನ ಸಮಿತಿಯಲ್ಲಿ ಇರದೇ ಇದ್ದರೆ ಸಂವಿಧಾನ ಸರ್ವವ್ಯಾಪಕವಾಗುತ್ತಿರಲಿಲ್ಲ: ಬೊಮ್ಮಾಯಿ
ಪ್ರಶ್ನೋತ್ತರ ವೇಳೆಯಲ್ಲಿ ಅಪ್ಪಾಜಿ ಸಿ.ಎಸ್.ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ನ್ಯಾಯಾಧಿಕರಣದ ತೀರ್ಪನ್ನು ಅಧಿಸೂಚನೆಯ ಮೂಲಕ ಪ್ರಕಟಿಸಿದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಯಾವುದೇ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ಕೇಂದ್ರ ಜಲಸಂಪನ್ಮೂಲ ಸಚಿವರ ಗಮನಕ್ಕೆ ತರಲಾಗಿದೆ ಎಂದರು.
ಒಮ್ಮೆ ಅಂತಿಮ ತೀರ್ಪನ್ನು ಅಧಿಸೂಚನೆಯ ಮೂಲಕ ಪ್ರಕಟಿಸಲು ಮಹಾರಾಷ್ಟ್ರ ವಿರೋಧಿಸಿತ್ತು ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ ಪ್ರಕಟಿಸಿಲ್ಲ. ಈಗ ಆಂಧ್ರಪ್ರದೇಶ ವಿರೋಧಿಸಿದೆ ಎಂಬ ಕಾರಣಕ್ಕೆ ಅಧಿಸೂಚನೆ ಹೊರಡಿಸಲು ಸಾಧ್ಯವಾಗಿಲ್ಲ. ಈಗ ಎಲ್ಲವನ್ನು ಪರಿಶೀಲನೆ ನಡೆಸುತ್ತಿದ್ದು, ಆದಷ್ಟು ಶೀಘ್ರ ಅಧಿಸೂಚನೆ ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಬಾಕಿ ಇರುವ ಯೋಜನೆಗಳನ್ನು ಪೂರ್ಣಗೊಳಿಸುವ ದೃಷ್ಟಿಯಿಂದ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕಿದೆ. ಹೀಗಾಗಿ ಅಧಿಸೂಚನೆ ಹೊರಡಿಸಬೇಕೆಂದು ಕೇಂದ್ರ ಜಲಶಕ್ತಿ ಸಚಿವರಲ್ಲಿ ಮನವಿ ಮಾಡಿದ್ದೇವೆ ಎಂದರು.
ಕಾಗವಾಡ ಕ್ಷೇತ್ರದ ಶಾಸಕ ಭರಮಗೌಡ ಅಲಗೌಡ ಕಾಗೆ ಅವರ ಪ್ರಶ್ನೆಗೆ ಉತ್ತರಿಸಿದ ಡಿಸಿಎಂ ಶಿವಕುಮಾರ್, ಬಸವೇಶ್ವರ ಏತನೀರಾವರಿ ಯೋಜನೆಗೆ 51 ಪ್ರಕರಣಗಳನ್ನೊಳಗೊಂಡ 176 ಎಕರೆ 18 ಗುಂಟೆ ಅವಶ್ಯಕವಾಗಿತ್ತು. ಇಲ್ಲಿಯವರೆಗೆ 9 ಪ್ರಕರಣಗಳ 332 ಎಕರೆ 30 ಗುಂಟೆಗೆ ಅವಾರ್ಡ್ ಆಗಿದ್ದು, ಮೂರು ಪ್ರಕರಣಗಳಿಗೆ ಸಂಬಂಧಿಸಿದ 183 ಎಕರೆ 23 ಗುಂಟೆ ಅವಧಿ ಮುಗಿದಿದ್ದು, ಅವಧಿ ವಿಸ್ತರಣೆಗೆ ಅನುಮೋದನೆ ದೊರೆತ ನಂತರ ಪರಿಹಾರ ಧನ ವಿತರಿಸಲಾಗುವುದು ಎಂದರು.
ಇದಲ್ಲದೆ 38 ಪ್ರಕರಣಗಳ ಪೈಕಿ 1442 ಎಕರೆ 9 ಗುಂಟೆ ಭೂಸ್ವಾಧೀನ ಅಸಿಂಧುಗೊಂಡಿದ್ದು, ಹೊಸದಾಗಿ ಅಧಿಸೂಚನೆ ಹೊರಡಿಸಲಾಗುವುದು. ಬಾಕಿ ಉಳಿದಿರುವ ಎಲ್ಲಾ ಪ್ರಕರಣಗಳ ಪ್ರಸ್ತಾವನೆಯನ್ನು ಪರಿಶೀಲಿಸಿ ಐತೀರ್ಪು ಪಡೆದು ಸ್ವಾಧೀನಪಡಿಸಿಕೊಂಡ ಜಮೀನಿನ ಮಾಲೀಕರಿಗೆ ಪರಿಹಾರಧನ ವಿತರಿಸಲಾಗುವುದು ಎಂದರು.




