ಕಬ್ಬು ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ಸಕ್ಕರೆ ಕಾರ್ಖಾನೆ ಮಾಲೀಕರ ಹಾಗೂ ಕಬ್ಬು ಬೆಳೆಗಾರರ ಪ್ರತಿನಿಧಿಗಳ ಸಭೆಯಲ್ಲಿ ಭಾಗವಹಿಸಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಯಿತು.
- ಬೆಂಗಳೂರಿನಲ್ಲಿ ಕನ್ನಡ ಗಜಲ್ ಯಾತ್ರೆ 100ರ ಸಂಭ್ರಮ
- ನಕಲಿ ದೇಶಪ್ರೇಮಿಗಳ ಆಟ ಇನ್ನೂ ರಾಜ್ಯದಲ್ಲಿ ನಡೆಯಲ್ಲ: ಬಿ ಕೆ ಹರಿಪ್ರಸಾದ್
- ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠ ಕಲಿಸುವುದು ನೂರು ಪರ್ಸೆಂಟ್ ಗ್ಯಾರೆಂಟಿ: ಆರ್ ಅಶೋಕ್
- ದರ್ಶನ್ ಪುಟ್ಟಣ್ಣಯ್ಯ ಅವರಿಗೆ ಸಚಿವ ಸ್ಥಾನ ನೀಡಿ
- ರಾಜಕೀಯ ಸಂತ ಶಾಂತವೇರಿ ಗೋಪಾಲಗೌಡ ಕೃತಿ ಲೋಕಾರ್ಪಣೆ
ಬೆಳಗಾವಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ 11.25 ಇಳುವರಿ ಬರುವ ಪ್ರತಿ ಟನ್ ಕಬ್ಬಿಗೆ ₹3,200 ಕೊಡುವ ನಿರ್ಧಾರಕ್ಕೆ ಕಾರ್ಖಾನೆ ಮಾಲೀಕರು ಒಪ್ಪಿಗೆ ಸೂಚಿಸಿದ್ದರು, ಈಗ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರು ತಲಾ 50 ರೂಪಾಯಿಗಳನ್ನು ಹೆಚ್ಚುವರಿಯಾಗಿ ಸೇರಿಸಿ ರೈತರಿಗೆ ಟನ್ ಗೆ ₹3,300 ಕೊಡಲು ತೀರ್ಮಾನಿಸಲಾಗಿದೆ.
ಕಬ್ಬಿನ ಇಳುವರಿ ಪ್ರಮಾಣ ಜಿಲ್ಲೆಯಿಂದ ಜಿಲ್ಲೆಗೆ ವ್ಯತ್ಯಾಸವಾಗುತ್ತದೆ. ಆದರೆ, ಇಂದಿನ ಸಭೆಯ ತೀರ್ಮಾನದಂತೆ ಎಲ್ಲಾ ಇಳುವರಿಗೂ 100 ರೂ. ಹೆಚ್ಚಳ ಆಗಲಿದೆ.
ನಮ್ಮದು ರೈತ ಪರ ಸರ್ಕಾರವಾಗಿದ್ದು, ಅನ್ನದಾತರಿಗೆ ಎಂದಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ.
– ಡಿ ಕೆ ಶಿವಕುಮಾರ್, ಡಿಸಿಎಂ




