ಬೆಂಗಳೂರು: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹೊತ್ತಿನಲ್ಲಿ ರಾಜ್ಯದಲ್ಲಿ ಪಕ್ಷಗಳಿಂದ ಪ್ರಚಾರ ಜೋರಾಗಿದೆ. ಇದೇ ಭಾನುವಾರ ಏಪ್ರಿಲ್ 14ರಂದು ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ಮತ್ತೊಂದು ಸುತ್ತಿನ ಪ್ರಚಾರ ನಡೆಸಲಿದ್ದಾರೆ.
- ಕೇಂದ್ರ ಸಚಿವ ಸಂಪುಟ ಸಭೆ ಬೇರೆ ರಾಜ್ಯಗಳಲ್ಲಿ ನಡೆಯಲಿ
- ಪಿ.ಪಿ.ಪಿ ಮಾದರಿ ಕೈ ಬಿಡಲು ಒತ್ತಾಯಿಸಿ ಸಚಿವ ಸಂಪುಟ ಸಭೆಗೆ ಮೆರವಣಿಗೆ: ಸಿಪಿಐಎಂ
- ಜನಸಹಭಾಗಿತ್ವದೊಂದಿಗೆ ಸ್ವಚ್ಛತಾ ಅಭಿಯಾನಕ್ಕೆ ಸಜ್ಜು
- UPI ಡಿಜಿಟಲ್ ಮೇಲಿನ ಹೆಚ್ಚುವರಿ ಶುಲ್ಕ ಪ್ರಸ್ತಾವನೆ ಹಿಂಪಡೆಯಬೇಕು
- ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪೌರ ಕಾರ್ಮಿಕರಿಗೆ ಸನ್ಮಾನ
ಕರ್ನಾಟಕ ಬಿಜೆಪಿ ತನ್ನ ರಾಜಕೀಯ ಪ್ರಚಾರದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಅಭಿಮಾನಿಗಳು ಮತ್ತು ಅನುಯಾಯಿಗಳಾದ ಸಾಮಾನ್ಯ ಜನರಿಗೆ ನಾನು ಮೋದಿ ಪರಿವಾರ, ಮೋದಿಗಾಗಿ ಒಂದು ಭಾನುವಾರ (ಮೋದಿಗಾಗಿ ಭಾನುವಾರ) ಅಭಿಯಾನದಲ್ಲಿ ಭಾಗವಹಿಸುವಂತೆ ಮನವಿ ಮಾಡುತ್ತಿದೆ. ಈ ನಿಟ್ಟಿನಲ್ಲಿ ಪ್ರಚಾರ ಕಾರ್ಯ ತೀವ್ರಗೊಳಿಸಿದೆ.
ಮೈಸೂರಿನಲ್ಲಿ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ದೇವೇಗೌಡ ವೇದಿಕೆ ಹಂಚಿಕೊಳ್ಳುವ ಸಾಧ್ಯತೆಯಿದೆ. ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ಹಾಸನ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಇಲ್ಲಿ ಸಾರ್ವಜನಿಕ ಸಭೆ ಆಯೋಜಿಸಲಾಗಿದೆ.
ನಂತರ ಮೋದಿ ಅವರು ಕಡಲ ತೀರ ಮಂಗಳೂರಿಗೆ ಲಗ್ಗೆ ಇಡಲಿದ್ದಾರೆ. ಇಲ್ಲಿ ಮೊದಲು ಬಹಿರಂಗ ಸಭೆಗೆ ನಿರ್ಧರಿಸಲಾಗಿತ್ತು. ಆದರೆ ನಂತರದಲ್ಲಿ ಕಾರ್ಯತಂತ್ರ ಬದಲಾಯಿಸಿರುವ ಬಿಜೆಪಿ, ಮಂಗಳೂರಿನ ನಾರಾಯಣ ಗುರು ವೃತ್ತದಿಂದ ಹಂಪನಕಟ್ಟೆವರೆಗೆ ಸುಮಾರು 2 ಕಿ.ಮೀ ವರೆಗೆ ಪ್ರಧಾನಿ ರೋಡ್ ಶೋ ನಡೆಸುವ ಕಾರ್ಯಕ್ರಮ ರೂಪಿಸಿದೆ.




