ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣಾ ಕಣ ದಿನೇದಿನೇ ರಂಗೇರತೊಡಗಿದೆ. ರಣರಣ ಬಿಸಿಲಿನ ನಡುವೆಯೂ ಚುನಾವಣಾ ಪ್ರಚಾರವೂ ಕಾವೇರುತ್ತಿದೆ. ತಮ್ಮ ಅಭ್ಯರ್ಥಿಗಳ ಗೆಲುವಿಗೆ ಪ್ರಚಾರ ನಡೆಸಲು ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ದಾಂಗುಡಿ ಇಟ್ಟಿದ್ದಾರೆ.
- ಭಾರತ ಕಲ್ಯಾಣ ರಾಷ್ಟ್ರವಾಗಲು ಅಂಬೇಡ್ಕರರ ವಿಚಾರಗಳನ್ನು ಅಳವಡಿಸಿಕೊಳ್ಳಬೇಕು: ಕೆ.ವೈ.ನಾರಾಯಣಸ್ವಾಮಿ
- Modi is confident that he can capture the Delimitation Commission too: Rahul Gandhi
- ಅಳವು ಅರಿಯದ ಭಾಷೆ – ತುಳುನಾಡಿನ ಅತ್ಯಂತ ಹೆಮ್ಮೆಯ ಕೃತಿ
- ಬದುಕುವ ದಾರಿ ಮಾತ್ರ ಶಿಕ್ಷಣವಲ್ಲ, ಮಾನವೀಯತೆಯೇ ನಿಜವಾದ ವಿದ್ಯೆ: ಸಿದ್ದರಾಮಯ್ಯ
- ಮರಾಠಿ ಕಡ್ಡಾಯಗೊಳಿಸಿದ ಮಹಾರಾಷ್ಟ್ರ ಮಾದರಿ ಕರ್ನಾಟಕಕ್ಕೂ ಬರಲಿ: ಟಿ.ಎ. ನಾರಾಯಣಗೌಡ
ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ಸಿಂಗ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವು ನಾಯಕರು ದಕ್ಷಿಣ ಕರ್ನಾಟಕದ ಹಲವೆಡೆ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿದರು.
ಬೆಳ್ಳಂಬೆಳಗ್ಗೆ ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಪಾರ್ಕ್, ಹೋಟೆಲ್, ಬಸ್ ನಿಲ್ದಾಣ ವಿವಿಧ ಜನನಿಬಿಡ ಪ್ರದೇಶಗಳಿಗೆ ಭೇಟಿ ನೀಡಿ ಮತಯಾಚನೆ ಮಾಡುತ್ತಿರುವುದು ಕಂಡುಬಂತು. ಮೊದಲ ಹಂತದ ಕ್ಷೇತ್ರಗಳಲ್ಲಿ ಮತಪ್ರಚಾರ ಬಿರುಸಾಗಿದೆ.
ಪ್ರಧಾನಿ ಮೋದಿ ಅವರು ಏಪ್ರಿಲ್ 14ರಂದು ರಾಜ್ಯಕ್ಕೆ ಆಗಮಿಸಿ ಹಲವೆಡೆ ತಮ್ಮ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ.




